RNI NO. KARKAN/2006/27779|Friday, May 17, 2024
You are here: Home » breaking news » ಗೋಕಾಕ:140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ.

ಗೋಕಾಕ:140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ. 

140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ.
ಗೋಕಾಕ ನ 27 : 140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ ಎಂದು
ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದರು.

ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.
ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ನಾವೆಲ್ಲಾ ಪಾಲ್ಗೊಳ್ಳಬೇಕಿದೆ. ಇಲಾಖೆಯ ಮುಖ್ಯಸ್ಥರು ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಕೆಲವೇ ಇಲಾಖೆಗಳಲ್ಲಿ ಇಂತಹ ಕಾರ್ಯವಾಗುತ್ತಿದ್ದು ಉಳಿದ ಇಲಾಖೆಗಳು ಕ್ರೀಡೆಗಳನ್ನು ಉತ್ತೇಜಿಸಬೇಕು, ಅರಣ್ಯ ಇಲಾಖೆ ಇಂತಹ ಕಾರ್ಯಗಳ ಮೂಲಕ ರಾಷ್ಟ್ರದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.
ಎರಡು ದಿನ ನಡೆಯುವ ಈ ಕ್ರೀಡಾಕೂಟದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಅರಣ್ಯ ಇಲಾಖೆಯ 400ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌಹಾನ, ಯುವ ನಾಯಕ ಅಮರನಾಥ ಜಾರಕಿಹೊಳಿ, ಪ್ರಾದೇಶಿಕ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಸ್ ಕೆ ಕಲ್ಲೋಳಿಕರ, ಪಿ ಶ್ರೀಧರ, ಕೆ ಸ್ ಗೊವರ, ಸಿ ಜಿ ಮಿರ್ಜಿ, ಶಿವಶರಣಯ್ಯ, ವನಿತಾ ಆರ್, ಶಿವಾನಂದ ನಾಯಕವಾಡಿ, ಡಿವೈಎಸ್‍ಪಿ ಡಿ ಎಚ್ ಮುಲ್ಲಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಸೀಮರಾಜ ತೇನಗಿ, ಸುನೀತಾ ನಿಂಬರಗಿ,  ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.

Related posts: