RNI NO. KARKAN/2006/27779|Sunday, February 15, 2026
You are here: Home » breaking news » ಘಟಪ್ರಭಾ:ಕಲಾಲ ಒಣಿಯಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ಘಟಪ್ರಭಾ:ಕಲಾಲ ಒಣಿಯಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ 

ಕಲಾಲ ಒಣಿಯಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ಘಟಪ್ರಭಾ ಡಿ 24 : ಸ್ಥಳೀಯ ಕಲಾಲ ಒಣಿಯಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ರವಿವಾರ ನಡೆದಿದೆ.
ಇಂದು ಮುಂಜಾನೆ ಚರಂಡಿಯಲ್ಲಿ ಯಾವುದೇ ವಸ್ತು ಪ್ಲಾಸ್ಟಿಕ್ ಬ್ಯಾಗಿನಲ್ಲಿ ಹಾಕಿ ಎಸೆದಿರುವ ಬಗ್ಗೆ ಗಮನಿಸಿದ ಸಾರ್ವಜನಿಕರು ಪ್ಲಾಸ್ಟಿಕ್ ಬ್ಯಾಗ್ ತೆರೆದು ನೋಡಿದಾಗ ಅದರಲ್ಲಿ ನವಜಾತ ಗಂಡು ಶಿಶುವಿನ ಶವ ಸಿಕ್ಕಿದೆ.
ಮಗುವಿನ ಶವ ಸಿಕ್ಕಿದೆ ಎಂಬ ವಿಷಯ ಪಟ್ಟಣದಲ್ಲಿ ಕಾಡ್ಗಿಚ್ಚಿನಂತೆ ಹರಡಿ ಸ್ಥಳಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ಈ ಬಗ್ಗೆ ಮಾಹಿತಿ ಪಡೆದುಕೊಂಡ ಘಟಪ್ರಭಾ ಪೆÇೀಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭೆ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಕೋಡ್; ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗಳನ್ನು ಹೊಂದಿರುವ ಘಟಪ್ರಭಾದಲ್ಲಿ ನವಜಾತ ಶಿಶುವಿನ ಶವ ಪತ್ತೆ ಯಾಗಿದ್ದು, ಇದು ನಗರದಲ್ಲಿ ನಡೆಯುತ್ತಿರುವ ಅನಧಿಕೃತ ಗರ್ಭಪಾತ (iಟಟegಚಿಟ ಂboಡಿಣioಟಿ) (ಭ್ರೂಣ ಹತ್ಯೆಯ) ಕರಾಳ ದಂಧೆಯ ಭಾಗವಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಪೆÇೀಲಿಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Related posts: