RNI NO. KARKAN/2006/27779|Friday, August 1, 2025
You are here: Home » breaking news » ಅರಬಾಂವಿ ಮತಕ್ಷೇತ್ರದ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ಅವರಿಗೆ ಸನ್ಮಾನ

ಅರಬಾಂವಿ ಮತಕ್ಷೇತ್ರದ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ಅವರಿಗೆ ಸನ್ಮಾನ 

ಅರಬಾಂವಿ ಮತಕ್ಷೇತ್ರದ ಕಾರ್ಯಕರ್ತರಿಂದ ಬಿ.ಎಸ್. ಯಡಿಯೂರಪ್ಪ ಅವರಿಗೆ ಸನ್ಮಾನ

ಘಟಪ್ರಭಾ ಮೇ 9: ಗೋಕಾಕ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಲ್ಲೋಳಿ ಪಟ್ಟಣದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸ್ವಾಗತಿಸಿ ಹೃತ್ಪೂರ್ವಕವಾಗಿ ಸತ್ಕರಿಸಿದರು.

ಕಲ್ಲೋಳಿಯ ಪಟ್ಟಣ ಪಂಚಾಯತಿ ಕಾರ್ಯಾಲಯದ ಎದುರು ಗೋಕಾಕದಿಂದ ಹಳ್ಳೂರ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗಮಧ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸಿದ ಅರಭಾವಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹೂಮಾಲೆ ಹಾಕಿ, ಫಲಪುಷ್ಟ ನೀಡಿ ಬೆಳ್ಳಿಯ ಗಣೇಶನ ವಿಗ್ರಹವನ್ನು ನೀಡಿ ಹೃದಯಸ್ಪರ್ಶಿಯಾಗಿ
ಸತ್ಕರಿಸಿದರು.
ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಮಾದರ ,ಸುಭಾಸ ಕುರಬೇಟ, ಪ್ರಭಾಶುಗರ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಪ್ಪ ಹೆಬ್ಬಾಳ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಬಸವಂತ ದಾಸನವರ, ತಾಪಂ ಮಾಜಿ ಸದಸ್ಯ ಅಶೋಕ ಮಕ್ಕಳಗೇರಿ, ಬಸು ಯಾದಗೂಡ, ವೀರನಗೌಡ ಪಾಟೀಲ, ಸ್ಲಂ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮಹಾದೇವ ಶೆಕ್ಕಿ, ಬಿಜೆಪಿಯ ಪದಾಧಿಕಾರಿಗಳು, ಕಲ್ಲೋಳಿ ಪಟ್ಟಣ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.

Related posts: