RNI NO. KARKAN/2006/27779|Wednesday, January 28, 2026
You are here: Home » breaking news » ಗೋಕಾಕ:ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ :ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ :ಶಾಸಕ ರಮೇಶ ಜಾರಕಿಹೊಳಿ 

ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಿ :ಶಾಸಕ ರಮೇಶ ಜಾರಕಿಹೊಳಿ
ಗೋಕಾಕ ಜ 15 : ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸೋಮವಾರದಂದು ನಗರದಲ್ಲಿ ಹಮ್ಮಿಕೊಂಡ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರ 852ನೇ ಜಯಂತಿಯ ಕಾರ್ಯಕ್ರಮದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಾ ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಇದೇ ಸಂಧರ್ಭದಲ್ಲಿ ಬೋವಿ ವಡ್ಡರ ಸಮಾಜದ ವತಿಯಿಂದ ಶಾಸಕರನ್ನು ಸತ್ಕರಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ತುಕಾರಾಮ ಕಾಗಲ , ಮಾರುತಿ ಮನವಡ್ಡರ, ಬಸವರಾಜ್ ವಡ್ಡರ್, ಪರಶುರಾಮ್ ವಡ್ಡರ್ , ಎಲ್.ಜಿ.ಗಾಡಿವಡ್ಡರ ಶಟ್ಟೆಪ್ಪಾ ಗಾಡಿವಡ್ಡರ ಪರಶುರಾಮ್ ವಡ್ಡರ , ಸಂಜೆಯ ವಡ್ಡರ್ ಬರಮಣ್ಣ ಗಾಡಿವಡ್ಡರ , ಎಂ.ಬಿ. ಗಾಡಿವಡ್ಡರ, ಗೋವಿಂದ್ ಗಾಡಿವಡ್ಡರ, ಹನುಮಂತ್ ಮನವಡ್ಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: