RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ದಿ.28 ರಂದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ : ವಿವೇಕ ಜತ್ತಿ ಮಾಹಿತಿ

ಗೋಕಾಕ:ದಿ.28 ರಂದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ : ವಿವೇಕ ಜತ್ತಿ ಮಾಹಿತಿ 

ದಿ.28 ರಂದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ : ವಿವೇಕ ಜತ್ತಿ ಮಾಹಿತಿ

ಗೋಕಾಕ ಮಾ 26 : ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದಿನಾಂಕ 28 ರಂದು ಮುಂಜಾನೆ 11 ಘಂಟೆಗೆ ನಗರದ ಶ್ರೀ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಲಿದೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ , ಬೆಳಗಾವಿ ಲೋಕಸಭಾ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ, ಎಂ.ಎಲ್.ಸಿ.ಚನ್ನರಾಜ ಹಟ್ಟಿಹೊಳಿ,ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಕಾಂಗ್ರೆಸ್ ಅನೇಕ ನಾಯಕರು ಭಾಗವಹಿಸಲಿದ್ದು, ಗೋಕಾಕ ಮತ್ತು ಅರಭಾವಿ ಮತಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಕೋರಿದ್ದಾರೆ.

Related posts: