ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ ಅವರಿಂದ ನಾಮಪತ್ರ ಸಲ್ಲಿಕೆ

ಪ್ರಿಯಾಂಕಾ ಜಾರಕಿಹೊಳಿ ಅವರಿಂದ ನಾಮಪತ್ರ ಸಲ್ಲಿಕೆ
ಚಿಕ್ಕೋಡಿ ಎ 18 : ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಗುರುವಾರದಂದು ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ, ಮಾಜಿ ಡಿಸಿಎಂ ಅಥಣಿ ಶಾಸಕ ಲಕ್ಷ್ಮಣ್ ಸವದಿ,ದೆಹಲಿ ಪ್ರತಿನಿಧಿ ಎಂ.ಎಲ್.ಸಿ. ಪ್ರಕಾಶ್ ಹುಕ್ಕೇರಿ, ಮಾಜಿ ಸಚಿವ ವೀರಕುಮಾರ ಪಾಟೀಲ್, ಶಾಸಕರುಗಳಾದ ಗಣೇಶ್ ಹುಕ್ಕೇರಿ, ರಾಜು ಕಾಗೆ, ಬಾಹಾಸಾಹೇಬ ಪಾಟೀಲ,ರಾಜು ಸೇಠ್ ,ಮಹಾಂತೇಶ ಕೌಜಲಗಿ, ಮಹೇಂದ್ರ ತಮ್ಮಣವರ, ವಿಶ್ವಾಸ ವೈದ್ಯ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ರಾಹುಲ್ ಜಾರಕಿಹೊಳಿ, ಉತ್ತಮ ಪಾಟೀಲ್, ಪ್ರಭಾಕರ ಕೋರೆ, ಮಹಾವೀರ ಮೋಹಿತೆ, ಸೇರಿದಂತೆ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.