RNI NO. KARKAN/2006/27779|Saturday, June 15, 2024
You are here: Home » breaking news » ಗೋಕಾಕ:ಬಿಜೆಪಿ ಕಾರ್ಯಕರ್ತರು ಹತಾಶೆಯಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ : ಡಾ‌.ಮಹಾಂತೇಶ ಕಡಾಡಿ

ಗೋಕಾಕ:ಬಿಜೆಪಿ ಕಾರ್ಯಕರ್ತರು ಹತಾಶೆಯಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ : ಡಾ‌.ಮಹಾಂತೇಶ ಕಡಾಡಿ 

ಬಿಜೆಪಿ ಕಾರ್ಯಕರ್ತರು ಹತಾಶೆಯಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ : ಡಾ‌.ಮಹಾಂತೇಶ ಕಡಾಡಿ

ಗೋಕಾಕ ಮೇ 5 : ಗೋಕಾಕ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪರ ನಿಲುವು ಇದ್ದು , ಅದರಿಂದ ಹತಾಶೆಯಾಗಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ಮಹಾಂತೇಶ ಕಡಾಡಿ ಹೇಳಿದರು.

ರವಿವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು ಕಳೆದ 20 ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟದ್ದು, ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಅಂಕಲಗಿ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನೆ ಮೇಲೆ ಏಕಾಏಕಿ ನುಗ್ಗಿ ದಾಂಧಲೆ ಮಾಡಿದ್ದು, ಮನೆಯಲ್ಲಿಯ ಟ್ರೇಜರಿ ಒಡೆದು ಅದರಲ್ಲಿಯ ದುಡ್ಡನ್ನು ತೋರಿಸಿ ನೀವು ಅಂಕಲಗಿ ಭಾಗದಲ್ಲಿ ದುಡ್ಡು ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ಕಾರ್ಯಕರ್ತರ ರಕ್ಷಣೆಗೆ ಬಂದಾಗ ಡಾ.ಮಹಾಂತೇಶ ಕಡಾಡಿ ಅವರನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಶಾಮಿಲಾದ ಒಟ್ಟು 11 ಜನರ ಮೇಲೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದೆ ಸುಳ್ಳು ಸುದ್ದಿ ಹಬ್ಬಿಸಿರುವವರ ಮೇಲೆ ಮಾನ ಹಾನಿ ಮುಕ್ಕದಮೆ ದಾಖಲಿಸಲಾಗುವುದು ಎಂದ ಅವರು ಬಿಜೆಪಿ ಸೋಲುವ ಭಯದಿಂದ ಕಾರ್ಯಕರ್ತರನ್ನು ಹೆದರಿಸುವ ಕಾರ್ಯಮಾಡುತ್ತಿದ್ದಾರೆ ಯಾರು ಹೆದರದೆ ಮೇ 7 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಸಿದ್ದಲಿಂಗ ದಳವಾಯಿ , ಅಶೋಕ ಪೂಜಾರಿ, ಚಂದ್ರಶೇಖರ ಕೊಣ್ಣೂರ, ದಸ್ತಗಿರಿ ಪೈಲವಾನ, ಜಾಕಿರ ನಧಾಫ, ಶ್ರೀಮತಿ ಕಲ್ಪನಾ ಜೋಶಿ, ಸಿ.ಬಿ.ಗಿಡನ್ಞವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts: