RNI NO. KARKAN/2006/27779|Friday, July 12, 2024
You are here: Home » breaking news » ಗೋಕಾಕ:ಜೆಎಸ್‍ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಗೋಕಾಕ:ಜೆಎಸ್‍ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ 

ಜೆಎಸ್‍ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ
ವಿಶ್ವ ಪರಿಸರ ದಿನಾಚರಣೆ

ಗೋಕಾಕ ಜೂ 5 : ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ಗೋಕಾಕ ಶಿಕ್ಷಣ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಜೆಎಸ್‍ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಉಮೇಶ ಎಸ್ ಆತನೂರೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಕಡಕೋಳ, ಕಾರ್ಯದರ್ಶಿ ಆರ್ ಎಮ್ ವಾಲಿ, ಪ್ರಾಚಾರ್ಯ ಆರ್ ಬಿ ಬಿರಾದಾರ, ಪ್ರಧಾನ ಸಿವಿಲ್ ಹಾಗೂ ಜೆಎಮ್‍ಎಫ್‍ಸಿ ನ್ಯಾಯಾಧಿಶ ರಾಜೀವ ಗೊಳಸಾರ, ಎರಡನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಮ್‍ಎಫ್ ನ್ಯಾಯಾಧೀಶೆ ರೂಪಾ ಮಟ್ಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಾಸೀಂ ತೆಣಗಿ, ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಇದ್ದರು

Related posts: