RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ದಿ.20 ರಂದು ನೂತನ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿನಂಧನಾ ಸಮಾರಂಭ

ಗೋಕಾಕ:ದಿ.20 ರಂದು ನೂತನ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿನಂಧನಾ ಸಮಾರಂಭ 

ದಿ.20 ರಂದು ನೂತನ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿನಂಧನಾ ಸಮಾರಂಭ

ಗೋಕಾಕ ಜೂ 19 : ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ದಿ.20 ರಂದು ನೂತನ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ದಿ.20 ಗುರುವಾರದಂದು ನಗರದ ಶಾಸಕರ ಗೃಹ ಕಚೇರಿಯ ಮುಂಭಾಗ ನಡೆಯಲಿರುವ ಅಭಿನಂಧನಾ ಸಮಾರಂಭವು ಬೆಳಿಗ್ಗೆ 10 ಗಂಟೆಗೆ ಜರುಗಲಿದ್ದು, ಬೆಳಗಾವಿ ನೂತನ ಸಂದಸರಾಗಿ ಮೊದಲ ಬಾರಿಗೆ ಗೋಕಾಕ ನಗರಕ್ಕೆ ಜಗದೀಶ ಶೆಟ್ಟರ ಆಗಮಿಸಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡಿದ ಗೋಕಾಕ ಮತಕ್ಷೇತ್ರದ ಜನತೆಯನ್ನು ಉದ್ಧೇಶಿಸಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಮಾತನಾಡಲಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಗೋಕಾಕ ಮತಕ್ಷೇತ್ರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: