RNI NO. KARKAN/2006/27779|Friday, August 1, 2025
You are here: Home » ಬೆಳಗಾವಿ ಗ್ರಾಮೀಣ » ಗೋಕಾಕ: ಓಮಾನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗೋಕಿವಿಯ ನಾಲ್ವರು ಸಾವು

ಗೋಕಾಕ: ಓಮಾನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗೋಕಿವಿಯ ನಾಲ್ವರು ಸಾವು 

 

ಓಮಾನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗೋಕಿವಿಯ ನಾಲ್ವರು ಸಾವು

ಗೋಕಾಕ ಆ 30 :ಪ್ರವಾಸಕ್ಕೆಂದು  ಓಮಾನ್​ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್​ ನಗರದ ಕುಟುಂಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದೆ.

 ಓಮಾನ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು. ಕುಟುಂಬ ಓಮಾನ್​ಗೆ ಪ್ರವಾಸಕ್ಕೆ ತೆರಳಿತ್ತು.

ಹೈಮಾ ಎಂಬ ಪ್ರದೇಶದಲ್ಲಿ ಕುಟುಂಬ ತೆರಳುತ್ತುದ್ದ ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

Related posts: