RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ

ಗೋಕಾಕ:ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ 

ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ

ಗೋಕಾಕ ಅ 2 : ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ ಮಾಡಿ ವಿಭಾಗ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಾನ ಪಡೆದಿದ್ದಾರೆ.
ಫ್ರೌಢ ಶಾಲಾ ಬಾಲಕರ ವಿಭಾಗದ ಶೆಟಲ್ ಬ್ಯಾಟಮಿಂಟನ್ ನಲ್ಲಿ ಆದಿತ್ಯ ಡೊಂಗರೆ ಹಾಗೂ ಯಲ್ಲಪ್ಪ ಕಲಗುಟಗಿ ಪ್ರಥಮ , ಪ್ರಾಥಮಿಕ ವಿಭಾಗದ ಬಾಲಕರ ಶಟಲ್ ಬ್ಯಾಟಮಿಂಟನ್ ನಲ್ಲಿ ನಿತೇಶ ತಮ್ಮಣೆ ಜಿಲ್ಲಾ ತಂಡದಲ್ಲಿ ಸ್ಥಾನ ಪಡೆದು ವಿಭಾಗ ಮಟ್ಟದಲ್ಲಿ ಆಡಲಿದ್ದಾರೆ. ಪ್ರೌಢಶಾಲಾ ವಿಭಾಗದ 50 ಮೀಟರ್ ಫ್ರಿ ಸ್ಟ್ರೈಲ್ ಈಜು ಸ್ವರ್ಧೆಯಲ್ಲಿ ಆದಿತ್ಯ ಡೊಂಗರೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಚೇರಮನ್ ಡಾ‌.ಭೀಮಶಿ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ, ಆಡಳಿತಾಧಿಕಾರಿ ಬಿ.ಕೆ.ಕುಲಕರ್ಣಿ, ಮುಖ್ಯೋಪಾಧ್ಯಾಯನಿ ಹೆಚ್.ವ್ಹಿ.ಪಾಗನಿಸ, ದೈಹಿಕ ಶಿಕ್ಷಕ ಎಸ್.ಎಸ್.ದೊಡ್ಡಮನಿ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

Related posts: