ಬೆಳಗಾವಿ:ಕರ್ನಾಟಕ ರಾಜ್ಯೋತ್ಸವದ ಮುನ್ನ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕ್ಯಾತೆ
ಕರ್ನಾಟಕ ರಾಜ್ಯೋತ್ಸವದ ಮುನ್ನ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕ್ಯಾತೆ
ಬೆಳಗಾವಿ ಅ 26: ಕರ್ನಾಟಕ ರಾಜ್ಯೋತ್ಸವಕ್ಕೆ ಮುನ್ನ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆ ಕನ್ನಡಿಗರನ್ನು ಮತ್ತು ಕರ್ನಾಟಕ ಸರಕಾರವನ್ನು ಅವಮಾನಿಸುವ ಕೃತ್ಯಕ್ಕೆ ಮುಂದಾಗಿ ಸರಕಾರವನ್ನು ಅವಮಾನಿಸಿದ್ದಾರೆ
ಇನ್ನು ಇತ್ತ ಕರ್ನಾಟಕದಲ್ಲಿ ನವೆಂಬರ್ 1 ಕನ್ನಡ ರಾಜೋತ್ಸವವನ್ನ ಅದ್ಧೂರಿಯಾಗಿ ಆಚರಿಸಲು ಮುಂದಾಗಿದ್ದರೆ ಅತ್ತ ಕರ್ನಾಟಕ-ಮಹಾರಾಷ್ಟ್ರದ ಗಡಿಯಲ್ಲಿ ಶಿವಸೇನಾ ಕಾರ್ಯಕರ್ತರಿಂದ ಬೆಳಗಾವಿ ಸಮೀಪದ ಚಂದಗಡ ತಾಲೂಕಿನ ಸಿನ್ನೊಳ್ಳಿಯಲ್ಲಿ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕದಲ್ಲಿ ಮರಾಠಿಗರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ, ಕರ್ನಾಟಕ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ವರ್ಷ ರಾಜ್ಯೋತ್ಸವ ದಿನಾಚರಣೆ ವೇಳೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಸಂದೇಶ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಇಬ್ಬರು ಯುವಕರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನೊಂದೆಡೆ ಗಡಿಯಲ್ಲಿ ಕೊಲ್ಲಾಪೂರ ಜಿಲ್ಲೆ ಶಿವಸೇನಾ ಮುಖಂಡರು ಬೆಳಗಾವಿಯಲ್ಲಿರುವ ಮರಾಠಿಗರನ್ನು ಪ್ರಚೋದಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.