RNI NO. KARKAN/2006/27779|Friday, August 1, 2025
You are here: Home » breaking news » ಗೋಕಾಕ:ಸಚಿವರಾದ ಅಮೀತ ಶಾ ಅವರು ಬೇಷರತ್ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ಗೋಕಾಕ:ಸಚಿವರಾದ ಅಮೀತ ಶಾ ಅವರು ಬೇಷರತ್ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ 

ಸಚಿವರಾದ ಅಮೀತ ಶಾ ಅವರು ಬೇಷರತ್ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ
ಗೋಕಾಕ ಡಿ 19 : ಗೃಹ ಸಚಿವರಾದ ಅಮೀತ ಶಾ ಅವರು ಬೇಷರತ್ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ಮಾದಿಗ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ವತಿಯಿಂದ ಗುರುವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಲಾಯಿತ್ತು.

“ಅಂಬೇಡ್ಕರ್… ಅಂಬೇಡ್ಕರ್… ಅಂಬೇಡ್ಕರ್… ಅಂಬೇಡ್ಕರ್… ಅಂಬೇಡ್ಕರ್… ಎಂದು ಅಂಬೇಡ್ಕರ ಅವರ ಹೆಸರನ್ನು ಪದೇ ಪದೇ ಬಳಸುವುದು ಶೋಕಿಯಾಗಿದೆ, ಅವರ ಹೆಸರು ಬದಲಿಗೆ ಭಗವಂತನ ಹೆಸರನ್ನು ಹೇಳಿದ್ದರೆ ಏಳು ಜನ್ಮದ ವರೆಗೂ ಸ್ವರ್ಗ ಲಭ್ಯವಾಗುತ್ತಿತ್ತು” ಎಂಬ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದು ಅಂಬೇಡ್ಕರ್ ವಿರೋಧಿ ಮನೋಭಾವ ಎದ್ದು ಕಾಣುತ್ತದೆ. ಇಂತಹ ಅಭದ್ರ ಹೇಳಿಕೆ ಇಡೀ ದೇಶದ ಶೋಷಿತ ಸಮುದಾಯಗಳ ಸಂಕಷ್ಟ ಮತ್ತು ಅವಮಾನವನ್ನು ಪುನಃ ಒತ್ತಿಹೇಳುತ್ತದೆ. ಅವರ ಈ ಹೇಳಿಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭಾರತದ ಇತಿಹಾಸದಲ್ಲಿ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತ ವರ್ಗಗಳಿಗೆ ಮಾನವೀಯ ಬದುಕು ನೀಡಿದ ಶಕ್ತಿ ಬಾಬಾಸಾಹೇಬ ಅಂಬೇಡ್ಕರ ರವರು ಕೊಟ್ಟ ಸಂವಿಧಾನ ಮತ್ತು ಅವರ ಮಾರ್ಗದರ್ಶಕ ತತ್ವಗಳಿಂದ ಬಂದಿದೆ. ಅಸ್ಪೃಶ್ಯತೆ, ಅಸಮಾನತೆ, ಮತ್ತು ಶೋಷಣೆಯ ವಿರುದ್ಧ ಬಾಬಾಸಾಹೇಬ ಅಂಬೇಡ್ಕರ ರವರು ತಮ್ಮ ತ್ಯಾಗ, ಅಧ್ಯಯನ ಮತ್ತು ಬದ್ಧತೆಯ ಮೂಲಕ ಸಮಾಜವನ್ನು ಮೇಲೆತ್ತಿದ ಸತ್ಯವನ್ನು ಮರೆಯುವಂತಿಲ್ಲ. ಅಮಿತ್ ಶಾ ಅವರಂತಹ ವ್ಯಕ್ತಿಗಳು ಇಂತಹ ಹೀನ ಹೇಳಿಕೆ ಕೊಟ್ಟಿರುವುದರಿಂದ ಅವರು ದೇಶದ ಜನತೆ ಮುಂದೆ ಕ್ಷಮೆಯಾಚಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ತಕ್ಷಣ ಕ್ಷೇಮೆ ಕೇಳಿ ರಾಜೀನಾಮೆ ನೀಡಬೇಕು ಎಂದು ದಲಿತಪರ ಸಂಘಟನೆಗಳು ಮನವಿಯಲ್ಲಿ ಒತ್ತಾಯಿಸಿವೆ .

ಈ ಸಂದರ್ಭದಲ್ಲಿ ಲಕ್ಷ್ಮಣ ತಳಗಡೆ, ಸತ್ಯಜಿತ್ ಕರವಾಡೆ,ರಮೇಶ ಮಾದರ,ರವಿ ಕಡಕೋಳ,ಮಲ್ಲಪ್ಪ ಅಮ್ಮಣಗಿ,ಶಂಕರ ಸಂತವ್ವಗೋಳ, ಭೀಮಶಿ ಹರಿಜನ,ಸಂಜು ಮಾದರ, ಜಯಶ್ರೀ ಮಾದರ,,ಮಣಿಕಂಟ ರಾಮಗಾನಟ್ಟಿ, ಸಂತೋಷ ಕಾಂಬಳೆ, ಆನಂದ ನಿಪ್ಪನ್ಯಾಳ ಉಪಸ್ಥಿತರಿದ್ದರು .

Related posts: