ಬೆಳಗಾವಿ :ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು
ಬೆಳಗಾವಿ ಡಿ 19 :-ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಅವರ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿ ಕೇಸು ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು, ಮಹಿಳೆಯರ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಟೀಕೆ ಎಂಬುದು ಸೇರಿ ಬಿಎನ್‌ಎಸ್ ಕಾಯ್ದೆಯಡಿ ಹಿರೇ ಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕೇಸ್ ದಾಖಲಾದ ಬೆನ್ನಲ್ಲೇ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಿ.ಟಿ. ರವಿ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿದ್ದಾರೆ.
ರವಿ ಅವರನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ.