ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗೋಕಾಕ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗೋಕಾಕ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ
ಗೋಕಾಕ ಮೇ 3 : ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜಿ.ಇ.ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 117 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶೇಕಡಾ 68.37 ಫಲಿತಾಂಶ ದಾಖಲಿಸಿದ್ದಾರೆ.
ಸ್ಪೂರ್ತಿ ಪತ್ತಾರ 616 (98.56) ಶಾಲೆಗೆ ಪ್ರಥಮ, ಸಂಜೀವಿನಿ ಪಾಟೀಲ 608 (97.28) ದ್ವೀತಿಯ, ಅರ್ಜು ಶಮನ 604 (96.64) ತೃತೀಯ ಸ್ಥಾನ ಪಡೆದಿದ್ದಾರೆ. ಜೊತೆಗೆ 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ, 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 17 ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರಮನ್ ವಿ.ಎ.ಕಡಕೋಳ, ವಿಶ್ವಸ್ಥ ಮಂಡಳಿಯ ಚೇರಮನ್ ಡಾ|| ಯು.ಬಿ.ಅಜರಿ, ಕಾರ್ಯದರ್ಶಿ ಆರ್.ಎಮ್.ವಾಲಿ, ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಸಿಬ್ಬಂದಿಯವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
