ಗೋಕಾಕ:ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ
ಗೋಕಾಕ ಮೇ 16 : ಸಂತಿಬಸ್ತವಾಡ ಗ್ರಾಮದಲ್ಲಿ ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಇಲ್ಲಿನ ಮುಸ್ಲಿಂ ಸಮಾಜ ಬಾಂಧವರು ಇಸ್ಲಾಂ ಧರ್ಮ ಗ್ರಂಥಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡರು ಈ ಘಟನೆಯಿಂದಾಗಿ ಮುಸ್ಲಿಂ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಮನಸ್ಸಿಗೆ ಧಕ್ಕೆ ಉಂಟಾಗಿದೆ. ಹಾಗಾಗಿ ಕಿಡಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಈ ರೀತಿ ಯಾವುದೇ ಘಟನೆಗಳು ಸಂಭವಿಸದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಾಜೀದ ಅಹ್ಮದ್, ಅಫಜಲ್ ಖತೀಬ, ಹಾಫೀಜ ಐಜಾಜ್ , ಅಜರ ಮುಜಾವರ, ಸರಫರಾಜ ನಾಶೀಪುಡಿ, ಶಂಶೋದ್ದೀನ ದೆವಡಿ ಸೇರಿದಂತೆ ಮುಸ್ಲಿಂ ಸಮಾಜದ ನೂರಾರು ಜನರು ಉಪಸ್ಥಿತರಿದ್ದರು.