ಗೋಕಾಕ:ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು
ಗೋಕಾಕ ಜೂ 1 : ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ಎಂದು ಸಿಪಿಐ ಸುರೇಶಬಾಬು ಹೇಳಿದರು.
ರವಿವಾರದಂದು ಬಕ್ರೀದ್ ಹಬ್ಬದ ನಿಮಿತ್ತ ನಗರದಲ್ಲಿ ಶಹರ ಪೊಲೀಸ್ ಠಾಣೆಯಲ್ಲಿ ಕರೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬ ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಿಎಸ್ಐ ಕೆ.ವಾಲಿಕರ ಮಾತನಾಡಿ ಕಾನೂನು ಸುವ್ಯವಸ್ಥೆ ಭಂಗ ತರುವ ಕಾರ್ಯ ಯಾರು ಮಾಡಬಾರದು. ಯುವಕರು ಸೋಶಿಯಲ್ ಮೀಡಿಯಾದಲ್ಲಿ ಧರ್ಮದ ಬಗ್ಗೆ, ವ್ಯಕ್ತಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡದಂತೆ ಸಮಾಜದ ಮುಖಂಡರು ಜವಾಬ್ದಾರಿಯುತ್ತವಾಗಿ ಕಾರ್ಯಮಾಡಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಾತ್ರಾ ಕಮಿಟಿಯ ಪ್ರಭು ಚವ್ಹಾಣ, ಅಂಜುಮನ್ ಕಮಿಟಿ ಅಧ್ಯಕ್ಷ ಜಾವೇದ್ ಗೋಕಾಕ , ನರಗಸಭೆ ಸದಸ್ಯರಾದ ಅಬ್ದುಲ್ ರಹೆಮಾನ ದೇಸಾಯಿ, ಕುತುಬುದ್ದೀನ ಗೋಕಾಕ, ಬಸವರಾಜ ಆರೆನ್ನವರ, ಇಲಾಹಿ ಖೈರದಿ, ಅಡಿವೆಪ್ಪ ಕಿತ್ತೂರ, ಕಿರಣ ಢಮಾಮಗರ, ಮುಸ್ತಾಕ ಖಂಡಾಯತ್, , ಜುಬೇರ ತರಾಸಗರ, ಸಗೀರ ಕೋತವಾಲ, ಬಸವರಾಜ ದೇಶನೂರ, ಇಸ್ಮಾಯಿಲ್ ಜಮಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.