RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು

ಗೋಕಾಕ:ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು 

ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು

ಗೋಕಾಕ ಜೂ 4 : ಬಸ್‌ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ  ಓರ್ವ ಮಹಿಳೆ ಸ್ಥಳದಲ್ಲೇ  ಮೃತಪಟ್ಟಿರುವ ಘಟನೆ  ತಾಲೂಕಿನ ಬೆನಚನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
 ಕೊಳವಿ ಗ್ರಾಮದ ಯಲ್ಲವ್ವ ಬೀರನಗಡ್ಡಿ(70) ಎಂಬ ಮಹಿಳೆ ಮೃತ ಪಟ್ಟಿದ್ದಾಳೆ. ಲಾರಿ ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್‌ ನಡಿ ಮಹಿಳೆ ಸಿಲುಕಿ ಮೃತಪಟ್ಟಿದ್ದಾರೆ. ಪಲ್ಟಿಯಾಗಿದ್ದ ಬಸನಲ್ಲಿದ್ದ 15 ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಈ ಕುರಿತು ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts: