ಗೋಕಾಕ:ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಗೋಕಾಕ ಜೂ 5 : ಇಲ್ಲಿನ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಗುರುವಾರದಂದು ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಸಂಸ್ಥೆಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಿ.ಎಫ್.ಓ ಶಿವಾನಂದ ನಾಯಿಕವಾಡಿ, ಎ.ಸಿ.ಎಫ್. ವಸೀಮ ತೆನಗಿ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಸಂಸ್ಥೆಯ ಆಡಳಿತಾಧಿಕಾರಿ ಅಡಿವೇಶ ಗವಿಮಠ, ಡಾ.ವಿಶ್ವನಾಥ್ ಸುಣಧೋಳಿಮಠ, ಪ್ರಾಚಾರ್ಯ ಎಸ್.ಕೆ.ಮಠದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.