RNI NO. KARKAN/2006/27779|Monday, September 28, 2026
You are here: Home » breaking news » ಗೋಕಾಕ:ಬಾಲಕಾರ್ಮಿಕ ಪದ್ಧತಿ ನಿವಾರಣೆಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು : ನ್ಯಾಯಾಧೀಶ ಉಮೇಶ ಅತ್ನೂರೆ

ಗೋಕಾಕ:ಬಾಲಕಾರ್ಮಿಕ ಪದ್ಧತಿ ನಿವಾರಣೆಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು : ನ್ಯಾಯಾಧೀಶ ಉಮೇಶ ಅತ್ನೂರೆ 

ಬಾಲಕಾರ್ಮಿಕ ಪದ್ಧತಿ ನಿವಾರಣೆಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು : ನ್ಯಾಯಾಧೀಶ ಉಮೇಶ ಅತ್ನೂರೆ

ಗೋಕಾಕ ಜೂ 13 : ಬಾಲಕಾರ್ಮಿಕ ಪದ್ಧತಿ ನಿವಾರಣೆಯಾಗಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು. ಅರಿವಿನ ಕೊರತೆಯಿಂದಾಗಿಯೇ ಇಂತಹ ಪದ್ಧತಿಗಳು ಇಂದಿಗೂ ಜೀವಂತವಾಗಿವೆ’ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಅಧ್ಯಕ್ಷರು ಕಾನೂನು ಸೇವೆಗಳ ಸಮಿತಿ ಉಮೇಶ ಅತ್ನೂರೆ ಹೇಳಿದರು.

ಗುರುವಾರದಂದು ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಹಾಗೂ ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಕಾನೂನು ಸಾಕ್ಷರತಾ ಕಾರ್ಯಕ್ರಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕುರಿತು ಕೇವಲ ಕಾರ್ಯಕ್ರಮ ಆಯೋಜಿಸಿದರೆ ಸಾಲದು. ಅದನ್ನು ಮೀರಿ ಮಾಡಬೇಕಾದ ಹಲವು ಕೆಲಸಗಳಿವೆ. ವಿವಿಧ ಕಾರಣಗಳಿಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿದಾಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗುತ್ತದೆ’ ಎಂದರು.
‘ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಪ್ರಕಾರ ಅಪರಾಧ. ಇದಕ್ಕಾಗಿ, ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನಿನಡಿ ಶಿಕ್ಷೆ ವಿಧಿಸಲು ಅವಕಾಶವಿದೆ. ತಾಲೂಕಿನಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ನಿಗಾ ಇಡಬೇಕು’ ಎಂದು ಹೇಳಿದರು .

ವೇದಿಕೆಯಲ್ಲಿ ಮಾನ್ಯ ಪ್ರಧಾನ ಸಿವಿಲ್ ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೈತ್ರಾ ಕುಲಕರ್ಣಿ, ಮಾನ್ಯ 1 ನೇ ಅಧಿಕ ಸಿವಿಲ್ ಜೆ.ಎಂ.ಎಫ್.ಸಿ ನ್ಯಾಯಾಧೀಶ ಶ್ರೀ ಅಭಿನಯ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್ ಜಿ.ಬಿ.ಪಾಟೀಲ್, ಮುಖ್ಯೋಪಾಧ್ಯಾಯ ಬಿ.ಆರ್.ಚಿಪ್ಪಲಕಟ್ಟಿ, ದೈಹಿಕ ಶಿಕ್ಷಣ ಅಧಿಕಾರಿ ಎಲ್.ಕೆ.ತೊರನಗಟ್ಟಿ ಉಪಸ್ಥಿತರಿದ್ದರು.

Related posts: