ಗೋಕಾಕ:ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದೆ : ಸುಭಾಸ ಪಾಟೀಲ್

ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದೆ : ಸುಭಾಸ ಪಾಟೀಲ್
ಗೋಕಾಕ ಜೂ 20 : ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ದಶಕಗಳ ಜಡತ್ವ ಮುರಿದು ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದೆ ಎಂದು ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸುಭಾಸ ಪಾಟೀಲ ಹೇಳಿದರು.
ಅವರು, ನಗರದಲ್ಲಿ ಶುಕ್ರವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿ ಆವರಣದಲ್ಲಿ ಗೋಕಾಕ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರಕಾರವು 11ವರ್ಷ ಪೂರ್ಣಗೊಂಡಿರುವದರಿಂದ ವಿಕಸಿತ ಭಾರತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವದರ ಮೂಲಕ ಜನ ನಾಯಕರಾಗಿದ್ದಾರೆ. ಮೋದಿಯವರು ದೇಶದ ಬದ್ಧತೆಗೆ ಶ್ರಮಿಸುತ್ತಿದ್ದಾರೆ. ಹೀಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ 11ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ದೇಶ ಕಂಡಿದೆ. ಮುಂದಿನ ದಿನಗಳಲ್ಲಿ ಇದಕ್ಕಿಂತ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದರು.
ಕೇಂದ್ರ ಸರಕಾರದ 11ವರ್ಷಗಳ ಸಾಧನೆ ಪ್ರದರ್ಶನವನ್ನು ಯುವ ನಾಯಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಬಿಜೆಪಿ ಮುಖಂಡರಾದ ಲಕ್ಷ್ಮಣ ತಪಸಿ, ಸಂದೀಪ ದೇಶಪಾಂಡೆ, ಮಹೇಶ ಮೋಹಿತೆ, ಶಿವಾನಂದ ಹನುಮಸಾಗರ, ಬಸನಗೌಡ ಕೊಳದೂರ, ಶಕೀಲ ಧಾರವಾಡಕರ, ಶಾಮಾನಂದ ಪೂಜೇರಿ, ಶಿವಾನಂದ ಪಾಟೀಲ, ಸುರೇಶ ಪತ್ತಾರ, ರಾಜೇಶ್ವರಿ ಒಡೆಯರ ಇದ್ದರು.