ಗೋಕಾಕ:ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ

ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ
ಗೋಕಾಕ ಜೂ 21: ವಕೀಲರನ್ನು ಅವಹೇಳನ ಮಾಡಿದ್ದನ್ನು ಖಂಡಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಲ್ಲಿನ ವಕೀಲರ ಸಂಘದ ಪದಾಧಿಕಾರಿಗಳು ಶನಿವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ವಕೀಲರು ಸುಮಾರು 2 ಘಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ದಲಿತ ಸಂಘಟನೆ ಮುಖಂಡನ ವಿರುದ್ಧ ಘೋಷಣೆಗಳನ್ನು ಕೂಗಿ, ದಲಿತ ಮುಖಂಡನ್ನು ಬಂಧಿಸಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದರು.
ಈ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಬಿ.ಪಾಟೀಲ, ನ್ಯಾಯವಾದಿಗಳಾದ ಬಸವರಾಜ ಕೋಟಗಿ, ಸಿ.ಡಿ.ಹುಕ್ಕೇರಿ, ತಿಗಡಿ ಕಾನೂನು ರಕ್ಷಿಸುವ ನ್ಯಾಯವಾದಿಗಳನ್ನು ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿದರು ಸಹ ಪೊಲೀಸರು ಇಲ್ಲಿರವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಖಂಡನೀಯವಾಗಿದ್ದು, ಆದಷ್ಟು ಬೇಗ ವಕೀಲರನ್ನು ನಿಂದಿಸಿರುವ ದಲಿತ ಮುಖಂಡನ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ನಿರತ ಸ್ಥಳಕ್ಕೆ ಆಗಮಿಸಿದ್ದ ಬೆಳಗಾವಿ ಹೆಚ್ಚುವರಿ ಜಿಲ್ಲಾ ಪೊಲೀಸವರಿಷ್ಠಾಧಿಕಾರಿ ಅವರಿಗೆ ವಕೀಲರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಬಸವೇಶ್ವರ ವೃತ್ತದಲ್ಲಿ ಸುಮಾರು 2 ಘಂಟೆಗೂ ಹೆಚ್ಚುಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡಬೇಕಾಯಿತ್ತು.
ಪ್ರತಿಭಟನೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ನೂರಾರು ನ್ಯಾಯವಾದಿಗಳು ಉಪಸ್ಥಿತರಿದ್ದರು.