ಗೋಕಾಕ:ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆದರ್ಶ ಶಾಲೆಯ ಬಾಲಕಿಯರ ತಂಡ ಥ್ರೋಬಾಲ ಪಂದ್ಯದಲ್ಲಿ ಪ್ರಥಮ ಸ್ಥಾನ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆದರ್ಶ ಶಾಲೆಯ ಬಾಲಕಿಯರ ತಂಡ ಥ್ರೋಬಾಲ ಪಂದ್ಯದಲ್ಲಿ ಪ್ರಥಮ ಸ್ಥಾನ
ಗೋಕಾಕ ಸೆ 1: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಆದರ್ಶ ಕನ್ನಡ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ಥ್ರೋಬಾಲ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಕಡಕೋಳ, ಕಾರ್ಯದರ್ಶಿ ಆರ್.ಎಂ.ವಾಲಿ, ದೈಹಿಕ ಶಿಕ್ಷಕ ಗಂಗಾಧರ ಬಬಲೇಶ್ವರ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.