ಗೋಕಾಕ:ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇದ್ದು ಅದನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು : ಅಭಿನಂದನ ಜಿರಾಳೆ

ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇದ್ದು ಅದನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು : ಅಭಿನಂದನ ಜಿರಾಳೆ
ಗೋಕಾಕ ನ 11 : ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ವೇದಿಕೆಗಳಲ್ಲಿ ಪ್ರದರ್ಶಿಸಿ ಪ್ರತಿಭಾನ್ವಿತರಾಗಿರೆಂದು ಶಿಕ್ಷಣ ಅಧಿಕಾರಿ ಅಭಿನಂದನ ಜಿರಾಳೆ ಹೇಳಿದರು.
ಅವರು, ಮಂಗಳವಾರದಂದು ನಗರದ ಎನ್‍ಇಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರ, ಜಿವಿ ಮತ್ತು ಎಸ್ ವಿ ಕೌತನಾಳಿ ಪ್ರಾಥಮಿಕ ಮತ್ತು ನ್ಯೂ ಇಂಗ್ಲೀಷ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಗೋಕಾಕ ದಕ್ಷೀಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇದ್ದು ಅದನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಮಕ್ಕಳಲ್ಲಿಯ ಪ್ರತಿಭೆಯನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಸದುಪಯೋಗದಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರತಿಭಾನ್ವಿತರಾಗಿರೆಂದು ಹಾರೈಸಿದರು.
ಕಾರ್ಯಕ್ರಮವನ್ನು ಎನ್ ಇ ಎಸ್ ಸಂಸ್ಥೆಯ ಡಿ ಎಸ್ ಗೊರೋಶಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ಬಿ ಆರ್ ಚಿಪ್ಪಲಕಟ್ಟಿ ವಹಿಸಿದ್ದರು.
ಎನ್ ಇ ಎಸ್ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಕುರಬೇಟ, ನಿರ್ದೇಶಕ ಬಸವರಾಜ ಕ್ಯಾಸ್ತಿ, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
