ಗೋಕಾಕ:ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರ : ಶಾಸಕ ರಮೇಶ್

ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರ : ಶಾಸಕ ರಮೇಶ್
ಗೋಕಾಕ ನ 17: ದೇಶದ ಭವಿಷ್ಯಕ್ಕೆ ಮತ
ಪರಿಷ್ಕರಣೆ ಮಹತ್ವದ ನಿರ್ಧಾರವಾಗಿದ್ದು, ಅದಕ್ಕೆ ಎಲ್ಲರೂ ಸಹಕಾರ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಸೋಮವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಬಿ.ಎಲ್ ಎ -2 ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಸಮ್ಮತ ಚುನಾವಣೆಗೆ ಪ್ರಾಮಾಣಿಕ ಮತಪಟ್ಟಿ ಅವಶ್ಯಕವಾಗಿದೆ. ಅರ್ಹ ನಾಗರಿಕರು ಮತದಾನದಿಂದ ವಂಚಿತರಾಗಬಾರದು 23 ವರ್ಷಗಳ ನಂತರ ಮತಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯಾಗಿದ್ದು, ಸಂವಿಧಾನ ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆ.ಭೋಗಸ ಮತಗಳನ್ನು ತಗೆಯುವುದಕ್ಕೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದು ದುರ್ಧೈವದ ಸಂಗತಿ ಖೋಟ್ಟಿ ಮತದಾನದಿಂದ ದೇಶವನ್ನು ಮುಕ್ತಗೋಳಿಸಿ ಅರ್ಹ ನಾಗರಿಕರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಿಬೇಕು. ಈ ಮಹತ್ತರ ಕಾರ್ಯಕ್ರಮವನ್ನು ಯಶಸ್ವಿಗೋಳಿಸಲು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ನಿಜವಾದ ಭಾರತೀಯ ಮತದಾರರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಿ ದೇಶದ ಅಭಿವೃದ್ಧಿಗೆ ಸಹಕರಿಸುವಂತೆ ಕರೆ ನೀಡಿದರು.
ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ ಗೋಕಾಕ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸಕ್ರಿಯವಾಗಿ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೋಳಿಸುತ್ತಿದ್ದಾರೆ. ಡಾಕ್ಟರ್ ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ಕಾಂಗ್ರೆಸ್ ಹಿನ್ನಡೆ ಮಾಡಿದೆ ಮತಗಳ್ಳತನ ಮಾಡಿ ಚುನಾವಣೆಯಲ್ಲಿ ಪರಾಭವಗೊಳಿಸಿ ಇಂದು ಮತಗಳ್ಳತನದ ಬಗ್ಗೆ ಮಾತನಾಡುತ್ತಿದ್ದಾರೆ. ದೇಶದಲ್ಲಿ ಹಿಂದೂ ಮುಸ್ಲಿಂ ಭಾಂಧವರು ಅಣ್ಣ ತಮ್ಮಂದಿರಂತೆ ಇರಬೇಕು ಎಂಬುವುದೆ ಬಿಜೆಪಿ ಪಕ್ಷದ ಉದ್ದೇಶವಾಗಿದೆ. ಮುಸ್ಲಿಂ ಬಾಂಧವರು ಬಿಜೆಪಿಯನ್ನು ಬೆಂಬಲಿಸಿ ನಾವೆಲ್ಲ ಭಾರತೀಯರು ಒಂದೇ ಎಂಬ ಧ್ಯೇಯದಡಿ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಪ್ರವೃತ್ತರಾಗಿದ್ದು, ಅವರ ಕಾರ್ಯವನ್ನು ನಾವೆಲ್ಲರೂ ಬೆಂಬಲಿಸೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ರಾಷ್ಟ್ರೀಯ ಓಬಿಸಿ ಮೋರ್ಚಾದ ಲಕ್ಷ್ಮಣ ತಪಸಿ, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾದ ಶಕೀಲ್ ಧಾರವಾಡಕರ, ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜೇರಿ, ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮನ್ನವರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಎಲ್.ಎಸ್.ಕೋಲಕಾರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ವಡೆಯರ, ಬಿ.ಎಲ್.ಎ ಪ್ರಮುಖ ಮಾಣಿಕ ಈರಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಆನಂದ ಹತ್ತುಗೋಳ ಇದ್ದರು.
