ಗೋಕಾಕ:ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಕಲೆಗೆ ಮಹತ್ವ ಕೊಡಬೇಕು : ಸಚಿವ ಸತೀಶ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಕಲೆಗೆ ಮಹತ್ವ ಕೊಡಬೇಕು : ಸಚಿವ ಸತೀಶ
ಗೋಕಾಕ ಡಿ 23 : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಕಲೆಗೆ ಮಹತ್ವ ಕೊಟ್ಟು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮಂಗಳವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ 2025-26 ನೇ ಸಾಲಿನ ಚಿಕ್ಕೋಡಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ವರ್ಧೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾ ಪುರಸ್ಕಾರ ವೇದಿಕೆಯ ಮುಖಾಂತರ ಪ್ರತಿಭೆಯನ್ನು ಗುರುತಿಸುವ ಒಳ್ಳೆಯ ಅವಕಾಶ ಇದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಪ್ರತಿಭೆಯನ್ನು ಪ್ರದರ್ಶಿಸಿ ಉತ್ತಮ ನಾಗರಿಕರಾಗಬೇಕು ಎಂದರು.
ಈ ಭಾಗದಲ್ಲಿ ನಾವು ಕಳೆದ 22 ವರ್ಷಗಳಿಂದ ಸತೀಶ ಶುರ್ಗಸ ಅರ್ವಾಡ್ಸ ಮೂಲಕ ವಿದ್ಯಾರ್ಥಿಗಳಿಲ್ಲಿರುವ ಕಲೆಯನ್ನು ಗುರುತಿಸಿಸುವ ಕಾರ್ಯ ಮಾಡಿದ್ದೇವೆ ವಿದ್ಯಾರ್ಥಿಗಳು ಇದರ ಲಾಭ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಗೋಕಾಕ ಮತ್ತು ಚಿಕ್ಕೋಡಿಯ ಭಾಗದಲ್ಲಿ ನಾವು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಕಾರ್ಯಮಾಡುತ್ತಿದ್ದೇವೆ ಎಂದು ಹೇಳಿದರು.
ವೇದಿಕೆಯಲ್ಲಿ ಉಪನಿರ್ದೇಶಕ ಸೀತಾರಾಮ ಆರ್.ಎಸ್. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ, ಗೋಕಾಕ, ಮೂಡಲಗಿ, ನಿಪ್ಪಾಣಿ ಮತ್ತು ರಾಯಬಾಗ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರುಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು
