RNI NO. KARKAN/2006/27779|Wednesday, October 15, 2025
You are here: Home » breaking news » ಚಿಕ್ಕೋಡಿ:ಮಗುವಿಗೆ ಜನ್ಮ ನೀಡಿ ಎಸ್ಕೇಪ್ ಆಗಲು ಯತ್ನಿಸಿದ ಬಾಲಕಿ ಪೊಲೀಸರ ವಶಕ್ಕೆ

ಚಿಕ್ಕೋಡಿ:ಮಗುವಿಗೆ ಜನ್ಮ ನೀಡಿ ಎಸ್ಕೇಪ್ ಆಗಲು ಯತ್ನಿಸಿದ ಬಾಲಕಿ ಪೊಲೀಸರ ವಶಕ್ಕೆ 

ಮಗುವಿಗೆ ಜನ್ಮ ನೀಡಿ ಎಸ್ಕೇಪ್ ಆಗಲು ಯತ್ನಿಸಿದ ಬಾಲಕಿ ಪೊಲೀಸರ ವಶಕ್ಕೆ

 

ಚಿಕ್ಕೋಡಿ ನ 16: ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಮಗುವನ್ನು ಬಿಟ್ಟು ಬಾಲಕಿ ಪರಾರಿಯಾಗಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಹುಕ್ಕೇರಿ ತಾಲೂಕಿನ ಕೋಟಬಾಗಿ ಗ್ರಾಮದ 16 ವರ್ಷದ ಬಾಲಕಿಗೆ ಪ್ರಸವ ವೇದನೆ ಕಾಣಿಸಿಕೊಂಡಿದೆ. ಈ ವೇಳೆ ಬೈಕ್ ನಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆತರುತ್ತಿರುವಾಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಯುವತಿ ತನ್ನ ಸಂಬಂಧಿಕರ ಮನೆಗೆ ತೆರಳಿದ ಸಂದರ್ಭದಲ್ಲಿ ಉಮೇಶ್ ಎಂಬಾತ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪರಿಣಾಮವಾಗಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿದು ಬಂದಿದೆ.
ಇನ್ನು ಆಸ್ಪತ್ರೆಯಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಲು ಯತ್ನಿಸಿದಾಗ ಅಲ್ಲಿನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Related posts: