ಗೋಕಾಕ:ದಿನಾಂಕ 25 ರಂದು ಶ್ರೀ ಜಗದ್ಗುರು ಪಂಚಾರ್ಚಾಯ ಯುಗಮಾನೋತ್ಸವ ಕಾರ್ಯಕ್ರಮ: ಪ್ರಕಾಶ್ ಕಂಬಿ ಮಾಹಿತಿ

ದಿನಾಂಕ 25 ರಂದು ಶ್ರೀ ಜಗದ್ಗುರು ಪಂಚಾರ್ಚಾಯ ಯುಗಮಾನೋತ್ಸವ ಕಾರ್ಯಕ್ರಮ: ಪ್ರಕಾಶ್ ಕಂಬಿ ಮಾಹಿತಿ
ಗೋಕಾಕ ಎ 22: ಶನಿವಾರ ದಿನಾಂಕ 25 ರಂದು ನಗರದಲ್ಲಿ ಶ್ರೀ ಜಗದ್ಗುರು ಪಂಚಾರ್ಚಾಯ ಯುಗಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪ್ರಕಾಶ್ ಕಂಬಿ ಹೇಳಿದರು.
ಬುಧವಾರದಂದು ನಗರದ ಶ್ರೀ ವಿಠ್ಠಲ ರುಕ್ಮಿಣಿ ಸಭಾಂಗಣದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರ ಮಾತನಾಡಿದರು.
ಮುಂಜಾನೆ 8:30 ರಿಂದ 10:30 ಘಂಟೆಯ ವರೆಗೆ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಶ್ರೀ ವಿಠ್ಠಲ ರುಕ್ಮಿಣಿ ಸಭಾಂಗಣದ ವರೆಗೆ ಶ್ರೀಮದ್ ಕಾಶೀ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು, ಶ್ರೀ ಕಾಶೀ ಮಹಾಪೀಠ,ವಾರಾಣಸಿ ಇವರ ಸಾರೋಟೋತ್ಸವ ,ಮಹಿಳೆಯರ ಕುಭಮೇಳ, ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 10:30ಕ್ಕೆ ಶ್ರೀ ವಿಠಲ್ ರುಕ್ಮಿಣಿ ಸಭಾಂಗಣದಲ್ಲಿ ಧರ್ಮಸಭೆ ನಡೆಯಲಿದೆ.
ಶ್ರೀಮದ್ ಕಾಶೀ ಜ್ಞಾನ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಕಾರ್ಯಕ್ರಮದಲ್ಲಿ ಶ್ರೀ ಷ.ಬ್ರ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು, ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶ್ರೀ ಷ.ಬ್ರ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮ.ಘ.ಚ ಡಾ.ಪವಾಡೇಶ್ವರ ಮಹಾಸ್ವಾಮಿಗಳು, ಶ್ರೀ. ಷ.ಬ್ರ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ ಷ.ಬ್ರ ರಾಜಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಷ.ಬ್ರ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಷ.ಬ್ರ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸಮ್ಮುಖ ವಹಿಸಲಿದ್ದಾರೆ.
ಅತಿಥಿಗಳಾಗಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ, ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ.
ಸದರಿ ಕಾರ್ಯಕ್ರಮದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸರ್ವ ಸಮಾಜದ ಭಾಂಧವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕಂಬಿ ಅವರು ವಿನಂತಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ಹಿರೇಮಠ, ಸಂಗಮೇಶ ಗುಡದೂರಕಲ್ಮಠ, ಪಂಚಾಕ್ಷರಿ ಹೊಸಟ್ಟಿ, ಈರಣ್ಣ ಹಿರೇಮಠ, ಸೋಮಶೇಖರ್ ಹಿರೇಮಠ, ವಿರೇಂದ್ರ ಹಿರೇಮಠ ಉಪಸ್ಥಿತರಿದ್ದರು.
