RNI NO. KARKAN/2006/27779|Saturday, July 12, 2025
You are here: Home » breaking news » ಗೋಕಾಕ:ವಿದ್ಯಾರ್ಥಿನಿಯ ಸಾಧನೆಗೆ ಯುವ ಧುರೀಣ ಲಖನ್ ಜಾರಕಿಹೊಳಿ ಅಭಿನಂದನೆ

ಗೋಕಾಕ:ವಿದ್ಯಾರ್ಥಿನಿಯ ಸಾಧನೆಗೆ ಯುವ ಧುರೀಣ ಲಖನ್ ಜಾರಕಿಹೊಳಿ ಅಭಿನಂದನೆ 

ವಿದ್ಯಾರ್ಥಿನಿಯ ಸಾಧನೆಗೆ ಯುವ ಧುರೀಣ ಲಖನ್ ಜಾರಕಿಹೊಳಿ ಅಭಿನಂದನೆ

ಗೋಕಾಕ ನ 27 : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ (50 ಕೆ.ಜಿ.) ಸ್ಪರ್ಧೆಯಲ್ಲಿ ಇಲ್ಲಿಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ರಮ್ಯಾ ಅಪ್ಪಾಸಾಹೇಬ ಜಿರಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಯುವ ಧುರೀಣ ಲಖನ್ ಜಾರಕಿಹೊಳಿ ಅವರು ಅಭಿನಂದಿಸಿ ರಾಷ್ಟ್ರ ಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆದು ಕರದಂಟಿನೂರಿನ ಕೀರ್ತಿ ಪತಾಕೆಯನ್ನು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತೆ ಮಾಡಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎಸ್.ಎ.ಕೊತವಾಲ, ಮಹಾವಿದ್ಯಾಲಯದ ಪ್ರಾಚಾರ್ಯ ಎ.ವಾಯ್.ಹಾದಿಮನಿ, ಉಪನ್ಯಾಸಕರಾದ ಎಸ್.ಎಮ್.ಪೂಜೇರಿ, ಎಸ್.ವಾಯ್. ಖಾನಟ್ಟಿ, ದೈಹಿಕ ಶಿಕ್ಷಕ ಎಸ್.ಎಸ್.ಹಿರೇಮಠ ಸೇರಿದಂತೆ ಸಿಬ್ಬಂದಿಯವರು ಇದ್ದರು.

Related posts: