ಗೋಕಾಕ:ಶಿಕ್ಷಕರ ದಿನಾಚರಣೆಯ ನಿಮಿತ್ಯವಾಗಿ ಬೃಹತ್ ರಕ್ತದಾನ ಶಿಬಿರ

ಶಿಕ್ಷಕರ ದಿನಾಚರಣೆಯ ನಿಮಿತ್ಯವಾಗಿ ಬೃಹತ್ ರಕ್ತದಾನ ಶಿಬಿರ
ಗೋಕಾಕ ಆ 31 : ಶಿಕ್ಷಕರ ದಿನಾಚರಣೆಯ ನಿಮಿತ್ಯವಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೆ.3 ರಂದು ಮುಂಜಾನೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಗೋಕಾಕ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
