ಗೋಕಾಕ:ಎಸ್.ಐ.ಆರ್ ವಿರೋಧಿಸಿ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಎಸ್.ಐ.ಆರ್ ವಿರೋಧಿಸಿ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಗೋಕಾಕ ಅ 12 : ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ವಿರೋಧಿಸಿ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರದಂದು ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಡಾ.ಮಹಾಂತೇಶ ಕಡಾಡಿ ಮಾತನಾಡಿ, ಎಸ್.ಐ.ಆರ್ ಮೂಲಕ ದೇಶದ 13 ಕೋಟಿಗೂ ಅಧಿಕ ಮತದಾರರ ಹಕ್ಕನ್ನು ಕಸಿದುಕೊಂಡು, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿರುವ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಮಾತನಾಡಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಹಾಗೂ ವಿದ್ಯಾರ್ಥಿಗಳನ್ನು ಅಕ್ರಮ ಬಂಧನದಲ್ಲಿಟ್ಟು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೃಷ್ಟಿ ಮಾಡಿರುವುದು ಅತ್ಯಂತ ಖಂಡನೀಯ. ಅಕ್ರಮ ಬಂಧನದ ಮೂಲಕ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಾಕೀರ್ ನದಾಫ್ ಸಂಜು ಪೂಜಾರಿ, ಸದಾಶಿವ ಆಲೋಶಿ, ಬಾಬು ಫಣಿಬಂಧ, ಅಮೃತಗೌಡ ಪಾಟೀಲ, ಮಂಜುನಾಥ ಕಲ್ಲೋಳಿ ದಸ್ತಗೀರ ಪೈಲ್ವಾನ್, ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ಮಾಯಪ್ಪ ತಹಶೀಲ್ದಾರ್, ಸಾದಿಕ್ ಲಾಡಖಾನ, ಬಸವರಾಜ ಪಾಟೀಲ, ಗ್ಯಾರಂಟಿ ಸಮಿತಿ ಸದಸ್ಯರಾದ ಮಾರುತಿ ಜೋಗಿರಾಮಗೋಳ, ಸದಾನಂದ ಚೂನನ್ನವರ, ಸಿದ್ದಾರೂಢ ದಾಸಪ್ಪನವರ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶೌಕತ್ ಖಾಜಿ, ವಿವಿಧ ಸಮಿತಿಗಳ ಸದಸ್ಯರುಗಳು ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
