RNI NO. KARKAN/2006/27779|Thursday, October 16, 2025
You are here: Home » breaking news » ಬೆಳಗಾವಿ:ಹಿಂದೂಗಳ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿಹೆಚಪಿ , ಬಜರಂಗದಳ ದಿಂದ ಪ್ರತಭಟನೆ

ಬೆಳಗಾವಿ:ಹಿಂದೂಗಳ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿಹೆಚಪಿ , ಬಜರಂಗದಳ ದಿಂದ ಪ್ರತಭಟನೆ 

ಹಿಂದೂಗಳ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿಹೆಚಪಿ , ಬಜರಂಗದಳ ದಿಂದ ಪ್ರತಭಟನೆ

ಬೆಳಗಾವಿ ಡಿ 17: ಪರೇಶ ಮೆಸ್ತಾ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ದಿಂದ ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಬೃಹತ್ ಪ್ರತಿಭಟನೆ ನಡೆಯಿತು

ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಚನ್ನಮ್ಮ ವೃತ್ತದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಈ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ನಾಯಕರು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪೊಲೀಸರು ಕಾಲೇಜ್ ರಸ್ತೆ ಮಾರ್ಗವಾಗಿ ಮೆರವಣಿಗೆ ತೆರಳಲು ಸೂಚಿಸಿದ್ದರು. ಆದರೆ ಈ ಮಾರ್ಗದಲ್ಲಿ ಮೆರವಣಿಗೆ ನಡೆಸಲು ಪ್ರತಿಭಟನಾಕಾರರು ನಿರಾಕರಿಸಿದರು. ಮಾರುತಿ ಗಲ್ಲಿ ಮಾರ್ಗವಾಗಿ ಹೋಗುವುದಾಗಿ ಪಟ್ಟು ಹಿಡಿದರು. ಈ ವೇಳೆ ಶಾಸಕ ಸಂಜಯ ಪಾಟೀಲ ಮತ್ತು ಮಾಜಿ ಶಾಸಕ ಅಭಯ ಪಾಟೀಲ್‌ ಅವರು ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರ ಜೊತೆ ವಾಗ್ವಾದ ನಡೆಸಿದರು. 

Related posts: