RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ಗೋಕಾಕ:ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ 

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ಗೋಕಾಕ ಜ 28: ಕಲ್ಲೋಳಿಯ ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ, ಪಟ್ಟಣ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಯಿತು. ಲಸಿಕಾ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ: ಜ್ಯೋತಿಲಕ್ಷ್ಮೀ ಅಂಗಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ಶಂಕರ ನಿಂಗನೂರ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶ್ರೀ ಅರುಣಕುಮಾರ, ಸದಸ್ಯರಾದ ಶ್ರೀ ನೀಲಕಂಠ ಕಪ್ಪಲಗುದ್ದಿ, ಶ್ರೀ ಬಸವರಾಜ ಯಾದಗೂದ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶ್ರೀಮತಿ ಎಸ್.ಸಿ.ಅರಳಿಮಟ್ಟಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಎನ್.ಎಸ್.ಎಸ್. ಸ್ವಯಂ ಸೇವಕರು, ಪಟ್ಟಣ ಪಂಚಾಯತಿ ಸಿಬ್ಬಂಧಿ ವರ್ಗದವರು ಪಾಲ್ಗೊಂಡಿದ್ದರು.

Related posts: