RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಈ ಬಜೆಟ್ ಪೂರಕವಾಗಿದೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಈ ಬಜೆಟ್ ಪೂರಕವಾಗಿದೆ : ಬಾಲಚಂದ್ರ ಜಾರಕಿಹೊಳಿ 

ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಈ ಬಜೆಟ್ ಪೂರಕವಾಗಿದೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ ಫೆ 1: ಗುರುವಾರದಂದು ಕೇಂದ್ರ ಹಣಕಾಸು ಸಚಿವ ಅರುಣ ಜೇಟ್ಲಿ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿ, ಜನಸಾಮಾನ್ಯರ ಬದುಕನ್ನು ಹಸನುಗೊಳಿಸಲು ಈ ಬಜೆಟ್ ಪೂರಕವಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಭಾಗದವರಿಗೆ ಈ ಬಜೆಟ್ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಸಾಮಾಜಿಕ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಪರಿಶಿಷ್ಟ ಜಾತಿ, ಮಹಿಳೆಯರು ಹಾಗೂ ಬಡವರಿಗಾಗಿಯೇ ಮಾಡಿರುವ ವಿಶೇಷ ಬಜೆಟ್ ಎಂದು ಪ್ರತಿಕ್ರಿಯಿಸಿದ್ದಾರೆ.
ಪಿಎಂಜಿಎಸ್‍ವಾಯ್ ಯೋಜನೆಯಡಿ ಗ್ರಾಮಗಳನ್ನು ಗ್ರಾಮೀಣ ಸಂಪರ್ಕ ವ್ಯವಸ್ಥೆ ಮೂಲಕ ಉನ್ನತ ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳನ್ನು ಸಂಪರ್ಕ ಕಲ್ಪಿಸಲಾಗಿದೆ. ಮಹಿಳೆಯರಿಗಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಎಲ್ಲ ವರ್ಗಗಳ ಸ್ನೇಹಿಯಾಗಿದೆ. ಇದು ಪರಿವರ್ತನೆಯ ಮುಂಗಡ ಪತ್ರವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಣ್ಣಿಸಿ ಕೇಂದ್ರ ವಿತ್ತ ಸಚಿವ ಅರುಣ ಜೇಟ್ಲಿ ಅವರನ್ನು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

Related posts: