RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಅರಭಾವಿ ಮಂಡಲದಿಂದ 350 ಕ್ಕೂ ಅಧಿಕ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ

ಗೋಕಾಕ:ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಅರಭಾವಿ ಮಂಡಲದಿಂದ 350 ಕ್ಕೂ ಅಧಿಕ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ 

ಪರಿವರ್ತನಾ ಯಾತ್ರೆಯ ಸಮಾರೋಪಕ್ಕೆ ಅರಭಾವಿ ಮಂಡಲದಿಂದ 350 ಕ್ಕೂ ಅಧಿಕ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ

ಗೋಕಾಕ ಫೆ 3 : ನಾಳೆ ಭಾನುವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಅರಭಾವಿ ಮಂಡಲದಿಂದ 350 ಕ್ಕೂ ಅಧಿಕ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಮ. 2 ಗಂಟೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗುವರು. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬೆಂಗಳೂರಿಗೆ ತೆರಳಲು 30 ಕ್ರೂಸರ್ ವಾಹನಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಕೆಲವರು ರೈಲು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದಿಲ್ಲಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕ್ರೂಸರ್ ವಾಹನಗಳಿಗೆ ಯುವ ಧುರೀಣ ನಾಗಪ್ಪ ಶೇಖರಗೋಳ ಅವರು ಪೂಜೆ ಸಲ್ಲಿಸಿ ಕಾರ್ಯಕರ್ತರಿಗೆ ಶುಭ ಕೋರಿದರು.
ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಎಸ್‍ಟಿ ಮೋರ್ಚಾ ಅಧ್ಯಕ್ಷ ನಿಂಗಪ್ಪ ದೊಡಮನಿ, ರೈತ ಮೋರ್ಚಾ ಅಧ್ಯಕ್ಷ ಸಂಜು ಹೊಸಕೋಟಿ, ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts: