RNI NO. KARKAN/2006/27779|Tuesday, May 21, 2024
You are here: Home » breaking news » ಗೋಕಾಕ:ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿಯಲ್ಲಿ ಮುಂದೆ ಬರಲು ಸಾಧ್ಯ : ಶಾಸಕ ಬಾಲಚಂದ್ರ

ಗೋಕಾಕ:ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿಯಲ್ಲಿ ಮುಂದೆ ಬರಲು ಸಾಧ್ಯ : ಶಾಸಕ ಬಾಲಚಂದ್ರ 

ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿಯಲ್ಲಿ ಮುಂದೆ ಬರಲು ಸಾಧ್ಯ : ಶಾಸಕ ಬಾಲಚಂದ್ರ

ಗೋಕಾಕ ಫೆ 28 : ಸಮಾಜ ಸುಧಾರಣೆಯಲ್ಲಿ ಶಿಕ್ಷಣ ಪ್ರಮುಖ ಅಸ್ತ್ರವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಾಲಕರಿಗೆ ಕರೆ ನೀಡಿದರು.
ತಾಲೂಕಿನ ಮೆಳವಂಕಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿಯಲ್ಲಿ ಮುಂದೆ ಬರಲು ಕಾರಣವಾಗುತ್ತದೆ ಎಂದರು.
ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯ ಹೊಸ ಕೊಠಡಿಯನ್ನು ನಿರ್ಮಿಸಿ ಕೊಡಲಾಗುವುದು. ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.
ಅರಭಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೈಕ್ಷಣಿಕ ರಂಗದ ಬೆಳವಣಿಗೆಗೆ ಅವಿರತವಾಗಿ ಶ್ರಮಿಸಲಾಗುತ್ತಿದೆ. ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಈ ದಿಸೆಯಲ್ಲಿ ಸಾಕಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಹಾಕಿಕೊಂಡು ರಚನಾತ್ಮಕವಾಗಿ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಸ.ಹಿ.ಪ್ರಾ.ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಕಾಮಶೆಪ್ಪ ಕಿತ್ತೂರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಮೆಳವಂಕಿ ಗ್ರಾಪಂ ಅಧ್ಯಕ್ಷೆ ಸವಿತಾ ದೇಸಾಯಿ, ಸತ್ತೆಪ್ಪ ಬಬಲಿ, ಸಿದ್ದಪ್ಪ ಹಂಜಿ, ಸಣ್ಣದೊಡ್ಡಪ್ಪ ಕರೆಪ್ಪನವರ, ಮಹಾನಿಂಗ ಚಿಪ್ಪಲಕಟ್ಟಿ, ಅಲ್ಲಪ್ಪ ಕಂಕಣವಾಡಿ, ರಮೇಶ ಬೀರನಗಡ್ಡಿ, ನಾಗಪ್ಪ ಮಂಗಿ, ಅಡಿವೆಪ್ಪ ಚಿಪ್ಪಲಕಟ್ಟಿ, ಎಸ್‍ಡಿಎಂಸಿ ಸದಸ್ಯರು, ಪ್ರಧಾನ ಗುರು ಎಸ್.ಎಸ್. ಪವಾಡಿಗೌಡರ, ಮುಂತಾದವರು ಉಪಸ್ಥಿತರಿದ್ದರು.

Related posts: