ಘಟಪ್ರಭಾ:ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಶೈಕ್ಷಣಿಕವಾಗಿ ಮುಂದೆ ಬರಬೇಕು : ಸುಜಾತಾ ಪೂಜಾರಿ
ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಶೈಕ್ಷಣಿಕವಾಗಿ ಮುಂದೆ ಬರಬೇಕು : ಸುಜಾತಾ ಪೂಜಾರಿ
ಘಟಪ್ರಭಾ ಮಾ 4 : ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಶೈಕ್ಷಣಿಕವಾಗಿ ಮುಂದೆ ಬರಬೇಕೆಂದು ಪಟ್ಟಣ ಪಂಚಾಯತ ಅಧ್ಯಕ್ಷೆ ಸುಜಾತಾ ಪೂಜಾರಿ ಹೇಳಿದರು.
ಅವರು ಶನಿವಾರ ಸ್ಥಳೀಯ ಡಾ.ಜಾಕೀರ ಹುಸೇನ ಶಿಕ್ಷಣ ಸಂಸ್ಥೆಯ ಮದನಿ ಮಿಯಾ ಉರ್ದು ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತ, ಅಲ್ಪಸಂಖ್ಯಾತರಲ್ಲಿ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಪ್ರಮುಖರು ಹೆಚ್ಚಿನ ಕಾಳಜಿ ವಹಿಸಬೇಕೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ.ಎಚ್.ಐ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಘಣಶ್ಯಾಮ ವೈದ್ಯ ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜದ ವಹಿಳೆಯರ ಶಿಕ್ಷಣಕ್ಕಾಗಿ ಸತತ ಪ್ರಯತ್ನಿಸುತ್ತಿರುವ ಡಾ.ಜಾಕೀರ ಹುಸೇನ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘಣೀಯವಾಗಿದೆ. ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಪಡೆದು ಒಳ್ಳೆಯ ಹುದ್ದೆ ಅಲಂಕರಿಸುವ ಮೂಲಕ ಕಲಿತ ಸಂಸ್ಥೆಯ ಕೀರ್ತಿ ಹೆಚ್ಚಿಸಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸುಲ್ತಾನ ಕಬ್ಬೂರ ವಹಿಸಿದ್ದರು. ಈ ಸಂದರ್ಭದಲ್ಲಿ ಹಾಜಿ ಅಬ್ದುಲಗಣಿ ಮೋಮಿನ, ಡಾ.ಪ್ರಶಾಂತ ಬಬಲಾದಿ, ನಿರ್ದೇಶಕರಾದ ಅಬ್ಬಾಸ ಬಾಡಕರ, ಶೌಕತ್ ಕಬ್ಬೂರ, ಮೆಹಬೂಬ ದೇವಡಿ, ಮುಖ್ಯ ಶಿಕ್ಷಕ ಎನ್.ಎಮ್.ಬಾಗೆ, ಸಂಸ್ಥೆಯ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.