RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಸಹಕಾರ ಸಚಿವರ ಜಿಲ್ಲಾ ಪ್ರವಾಸ

ಗೋಕಾಕ:ಸಹಕಾರ ಸಚಿವರ ಜಿಲ್ಲಾ ಪ್ರವಾಸ 

ಸಹಕಾರ ಸಚಿವರ ಜಿಲ್ಲಾ ಪ್ರವಾಸ

ಗೋಕಾಕ ಮಾ, 20 ;- ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 21 ಮತ್ತು 22 ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ದಿ. 21 ರಂದು ಮುಂಜಾನೆ 10 ಗಂಟೆಗೆ ಬೆಳಗಾವಿಯಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಫ್‍ರೇಟಿವ್ ಮ್ಯಾನೇಜ್‍ಮೆಂಟ ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ ಗೋಕಾಕದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ದಿ. 22 ರಂದು ಮುಂಜಾನೆ 9 ಗಂಟೆಯಿಂದ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4-30 ಕ್ಕೆ ಬೆಳಗಾವಿಯಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: