RNI NO. KARKAN/2006/27779|Thursday, April 18, 2024
You are here: Home » breaking news » ಘಟಪ್ರಭಾ:ರಾಜಕೀಯ ಪಕ್ಷಗಳು ಕುರುಬ ಸಮಾಜಕ್ಕೆ ಟಿಕೇಟ್ ನೀಡುವ ವಿಚಾರದಲ್ಲಿ ಅನ್ಯಾಯ ಮಾಡುತ್ತಿವೆ : ಮೌರ್ಯ

ಘಟಪ್ರಭಾ:ರಾಜಕೀಯ ಪಕ್ಷಗಳು ಕುರುಬ ಸಮಾಜಕ್ಕೆ ಟಿಕೇಟ್ ನೀಡುವ ವಿಚಾರದಲ್ಲಿ ಅನ್ಯಾಯ ಮಾಡುತ್ತಿವೆ : ಮೌರ್ಯ 

ಮಾರುತಿ ಮರಡಿ ಮೌರ್ಯ

ರಾಜಕೀಯ ಪಕ್ಷಗಳು ಕುರುಬ ಸಮಾಜಕ್ಕೆ ಟಿಕೇಟ್ ನೀಡುವ ವಿಚಾರದಲ್ಲಿ ಅನ್ಯಾಯ ಮಾಡುತ್ತಿವೆ : ಮೌರ್ಯ

ಘಟಪ್ರಭಾ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಸಮುದಾಯ ರಾಜ್ಯದಲ್ಲಿ ಅತಿದೊಡ್ಡ ಸಮಾಜ ಆದರೆ ಸಾಮಾಜಿಕ ನ್ಯಾಯದಲ್ಲಿ ರಾಜಕೀಯ ಪಕ್ಷಗಳು ಕುರುಬ ಸಮಾಜಕ್ಕೆ ವಿಧಾನ ಸಭೆಯಲ್ಲಿ ಸ್ಪರ್ಧಿಸಲು ಟಿಕೇಟ್ ನೀಡುವ ವಿಚಾರದಲ್ಲಿ ಅನ್ಯಾಯ ಮಾಡುತ್ತಿವೆ ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕರಾದ ಮಾರುತಿ ಮರಡಿ ಮೌರ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಗುರುವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಬಹುದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಸ್ಥಾನಗಳಲ್ಲಿ ಮೀಸಲು ಹೊರತು ಪಡಿಸಿ ಜಿಲ್ಲೆಯಲ್ಲಿ ಹೆಚ್ಚು ಜನಸಂಖ್ಯೆ ಇರುವ ಕುರುಬ ಸಮಾಜಕ್ಕೆ ಟಿಕೆಟ್ ನೀಡಲು ಒತ್ತಾಯಿಸಿದ್ದಾರೆ.
ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮೀಸಲು ಕ್ಷೇತ್ರಗನ್ನು ಹೊರತುಪಡಿಸಿ ಕುರುಬ ಸಮುದಾಯಕ್ಕೆ ನಾಲ್ಕು ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳು ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡಬೇಕು.
ರಾಜ್ಯದಲ್ಲಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಕುರುಬ ಸಮಾಜದ ಸುಮಾರು 6 ಲಕ್ಷಕ್ಕೂ ಅಧಿಕ ಮತದಾರನ್ನು ಹೊಂದಿದೆ. 18 ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಕುರುಬ ಸಮಾಜದ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ. ಒಂದು ವೇಳೆ ಯಾವುದೇ ರಾಜಕೀಯ ಪಕ್ಷಗಳು ಪ್ರಾತಿನಿಧ್ಯ ನೀಡದಿದ್ದರೆ ಕುರುಬ ಸಮಾಜದ ಪಕ್ಷೇತರ ಅಭ್ಯರ್ಥಿಗಳನ್ನು ನಿಲ್ಲಿಸಿ. ಅವರನ್ನು ಗೆಲ್ಲಿಸಲು ಈಗಾಗಲೇ ಬಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ವಿವಿಧ ಕ್ಷೇತದಲ್ಲಿ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿದ ಹಲವಾರು ಜನ ನಿಷ್ಠಾವಂತ ಕಾರ್ಯಕರ್ತರು ನಮ್ಮ ಸಮಾಜದಲ್ಲಿದ್ದಾರೆ.
ಬೆಳಗಾವಿಯ ಕುರುಬರನ್ನು ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಒಟಿಗಾಗಿ ಮಾತ್ರ ಬಳಸಿಕೊಂಡು ರಾಜಕೀಯವಾಗಿ ಪ್ರಾತಿನಿಧ್ಯ ಕೊಡದೇ ವಂಚಿಸುತ್ತ ಬಂದಿದ್ದಾರೆ. ಆದ್ದರಿಂದ ಇದುವರೆಗೂ ಕುರುಬ ಸಮುದಾಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ ಹಾಗೆ ಈ ಬಾರಿಯೂ 2018ರ ವಿಧಾನ ಸಭಾ ಚುನಾವಣೆಯಲ್ಲಿ ನಿರ್ಲಕ್ಷ್ಯ ಮಾಡದೆ ಅವಕಾಶ ನೀಡಬೇಕು.
ಒಂದು ವೇಳೆ ಪ್ರಾತಿನಿಧ್ಯ ಸಿಗದೇ ಹೋದರೆ ನಮ್ಮ ಸಂಘಟನೇಯ ಮೂಕಲ ರಾಜ್ಯಾದ್ಯಂತ ಪಕ್ಷೇತರ ಅಭ್ಯರ್ಥಿಗಳನ್ನು ಕನಕ್ಕೆ ಇಳಿಸಲಾಗುವುದು ಎಂದು ಮಾರುತಿ ಮರಡಿ ಮೌರ್ಯ ಎಲ್ಲ ರಾಷ್ಟ್ರೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.

Related posts: