ಗೋಕಾಕ:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಜಯ ಕರ್ನಾಟಕ ಸಂಘಟನೆ ಒತ್ತಾಯ

ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸುತ್ತಿರುವ ಜಯ ಕರ್ನಾಟಕ ಸಂಘಟನೆ ಕಾರ್ಯರ್ತರು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಜಯ ಕರ್ನಾಟಕ ಸಂಘಟನೆ ಒತ್ತಾಯ
ಗೋಕಾಕ ಏ 25 : ಜಮ್ಮು ಕಾಶ್ಮೀರದ ಕಟುವಾ ಗ್ರಾಮದಲ್ಲಿ ಅಪ್ರಾತ್ತ 8 ವರ್ಷದ ಬಾಲಕಿ ಆಸೀಪಾ ಮೇಲೆ ಅತ್ಯಾಚಾರ ವೆಸಗಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬುಧವಾರದಂದು ಜಯ ಕರ್ನಾಟಕ ತಾಲೂಕಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿದರು
ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಸಂಘಟನೆಯ ಕಾರ್ಯಕರ್ತರು ಜಮ್ಮು ಕಾಶ್ಮೀರದ ಅಪ್ರಾಪ್ತ ಬಾಲಕಿ ಆಸೀಪಾ ಮೇಲೆ ಅತ್ಯಾಚಾರ ವೆಸಿಗಿ ಕೊಲೆಗೈದ ಕೊಲೆಗಡುಕರನ್ನು ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಿನಿ ವಿಧಾನಸೌದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿಸಿ ತಾಲೂಕಾ ದಂಡಾಧಿಕಾರಿಗಳ ಮುಖಾಂತರ ರಾಜ್ಯಪಾಲ ಮತ್ತು ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಿದರು .
ಪ್ರತಿಭಟನೆಯಲ್ಲಿ ಮಲ್ಲಕಜಾನ ತಲವಾರ , ಹೈದರಲ್ಲಿ ಮುಲ್ಲಾ , ಅಜೀಜ ಮೋಕಾಶಿ , ಮೌಲಾಲಿ ಪುಲತಾಂಬೆ ಸೇರಿದಂತೆ ಜಯ ಕರ್ನಾಟಕ ಸಂಘಟನೆಯ ತಾಲೂಕಾ ಮತ್ತು ಜಿಲ್ಲಾ ಪಧಾಧಿಕಾರಿಗಳು ಉಪಸ್ಥಿತರಿದ್ದರು