RNI NO. KARKAN/2006/27779|Wednesday, May 6, 2026
You are here: Home » breaking news » ಗೋಕಾಕ:ವಿದ್ಯಾದಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಗೋಕಾಕ:ವಿದ್ಯಾದಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 

ವಿದ್ಯಾದಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಗೋಕಾಕ ಮೇ 21 : 2018 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಅಧಿಕ ಅಂಕ ಪಡೆದಿರುವ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ನೆರವಾಗಲು ಸರೋಜಿನಿ ದಾಮೋದರನ್ ಫೌಂಡೇಷನ್ ಬೆಂಗಳೂರು ಇವರಿಂದ ವಿದ್ಯಾದಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನವು ವಿದ್ಯಾರ್ಥಿಯ ಅರ್ಹತೆಯ ಆಧಾರದ ಮೇಲೆ 10 ಸಾವಿರದಿಂದ 60 ಸಾವಿರ ರೂ.ಗಳಿಂದ ನೀಡಲಾಗುವುದು. ಅಂಗವೈಕಲ್ಯತೆ ಹೊಂದಿರುವ ವಿದ್ಯಾರ್ಥಿಗಳು ಶೇ 75 ರಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಮೀರಿರಬಾರದು, ಅರ್ಜಿಯನ್ನು https://vidyadhan.org/apply
ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಡಿಸೆಂಬರ್ 20 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ vidyadhan.karnataka@sdfoundationindia.com ಮೊ. 9986325234. 8296010803 ಸಂಪರ್ಕಿಸಬೇಕೆಂದು ಕೋರಲಾಗಿದೆ.

Related posts: