RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ

ಗೋಕಾಕ:ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ 

ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ

ಗೋಕಾಕ ಜೂ 13 : ಸನ್ 2018-19 ನೇ ಸಾಲಿಗಾಗಿ ಗೋಕಾಕ ತಾಲೂಕಿನ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ ಪೂರ್ವ ವಿದ್ಯಾರ್ಥಿ ವೇತನ ಮಂಜೂರಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
1 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಕಳೆದ ವರ್ಷಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇದ್ದ ಪಕ್ಷದಲ್ಲಿ ಅವರು ವೆಬ್‍ಸೈಟ್‍ನಿಂದ ಡೌನಲೋಡ ಮಾಡಿಕೊಂಡು ಅರ್ಜಿ ಭರ್ತಿ ಮಾಡಬೇಕು. ಆನ್‍ಲೈನ ಮೂಲಕ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ ಕಾರ್ಡ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತನ್ನ ಹೆಸರಿನಲ್ಲಿ ಕಡ್ಡಾಯವಾಗಿ ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ ಖಾತೆ ಹೊಂದಿರಬೇಕು ದಿ. 15ರ ಸಂಜೆ 6.00 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕ ಎಸ್.ವ್ಹಿ.ಕಲ್ಲಪ್ಪನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts: