RNI NO. KARKAN/2006/27779|Saturday, February 14, 2026
You are here: Home » breaking news » ಖಾನಾಪುರ:ಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು

ಖಾನಾಪುರ:ಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು 

ಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು

ಖಾನಾಪುರ , ಜೂನ್.24: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ದೇಶನೂರ ಗ್ರಾಮದ ಬಳಿ ನಡೆದಿದೆ.

ಖಾನಾಪುರದಿಂದ ಬೆಳಗಾವಿಗೆ ಮೂವರು ವಿದ್ಯಾರ್ಥಿಗಳು ಬೈಕ್ ಮೇಲೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರೆಲ್ಲರೂ ಬೆಳಗಾವಿಯ ಜೈನ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಅಂತ್ಯ ಸಂಸ್ಕಾರಕ್ಕೆಂದು ಹೊರಟವರು ದುರಂತ ಅಂತ್ಯಕಂಡರು!

ಬೆಳಗಾವಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸಿಪಿ ಬಾಲಚಂದ್ರ ಭೇಟಿ ನೀಡಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ.

ಸದ್ಯದ ಮಾಹಿತಿಯ ಪ್ರಕಾರ, ವೇಗದ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

Related posts: