RNI NO. KARKAN/2006/27779|Friday, May 9, 2025
You are here: Home » breaking news » ಗೋಕಾಕ:ರಾಜ್ಯದಲ್ಲಿಯೇ ಗೋಕಾಕ ತಾಲೂಕುವನ್ನು ಮಾದರಿಯನ್ನಾಗಿಸಲು ಶ್ರಮಿಸಲಾಗುತ್ತಿದೆ : ಸಚಿವ ರಮೇಶ

ಗೋಕಾಕ:ರಾಜ್ಯದಲ್ಲಿಯೇ ಗೋಕಾಕ ತಾಲೂಕುವನ್ನು ಮಾದರಿಯನ್ನಾಗಿಸಲು ಶ್ರಮಿಸಲಾಗುತ್ತಿದೆ : ಸಚಿವ ರಮೇಶ 

ರಾಜ್ಯದಲ್ಲಿಯೇ ಗೋಕಾಕ ತಾಲೂಕುವನ್ನು ಮಾದರಿಯನ್ನಾಗಿಸಲು ಶ್ರಮಿಸಲಾಗುತ್ತಿದೆ : ಸಚಿವ ರಮೇಶ

ಗೋಕಾಕ ಜು 1 : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ರಾಜ್ಯದಲ್ಲಿಯೇ ಗೋಕಾಕ ತಾಲೂಕುವನ್ನು ಮಾದರಿಯನ್ನಾಗಿ ಶ್ರಮಿಸಲಾಗುತ್ತಿದ್ದು ಅದಕ್ಕೆ ಎಲ್ಲರ ಸಹಾಯ ಸಹಕಾರ ಅತೀ ಮುಖ್ಯವಾಗಿದೆ ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ರವಿವಾರದಂದು ಇಲ್ಲಿಯ ಆದಿಜಾಂಬವ ನಗರದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ನೂತನವಾಗಿ ನಿರ್ಮಿಸಲಾದ ಡಾ. ಬಾಬಾಸಾಹೇಬ ಅಂಬೇಡಲರ ಭವನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗೋಕಾಕ ತಾಲೂಕಿನ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗೋಕಾಕ ನಗರ ಸೌಂದರ್ಯಿಕರಣ ಮಾಡಲು ಕ್ರಮ ಕೈಕೊಳ್ಳಲಾಗುತ್ತಿದ್ದು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ದೇಶಕ್ಕೆ ಬೆಳಕು ಚೆಲ್ಲಿದ ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡಕರ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಅಭಿವೃದ್ದಿಗೆ ಕಾರ್ಯಗಳಲ್ಲಿ ಜಾತಿ, ಭೇದ ಮರೆತು ನಾವೆಲ್ಲರೂ ಒಂದೇ ಎಂಬ ಮನೋಭಾವನೆಯಿಂದ ಕಾರ್ಯ ಮಾಡಬೇಕು. ಡಾ. ಅಂಬೇಡಕರ ಭವನದಲ್ಲಿ ಸಾಮಾಜಿಕ, ಧಾರ್ಮಿಕ, ಅಧ್ಯಾತ್ಮಿಕ ಸಂಘಟಿಸಿ ಸಂಸ್ಕಾರವಂತ ಸಮಾಜವನ್ನು ನಿರ್ಮಿಸುವಲ್ಲಿ ಯುವಕರು ಮುಂದಾಗಬೇಕೆಂದು ಕರೆ ನೀಡಿದರು.
ವೇದಿಕೆ ಮೇಲೆ ಜಿ.ಪಂ. ಸದಸ್ಯರುಗಳಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ, ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಜತ್ತಿ, ನಗರಸಭೆ ಹಿರಿಯ ಸದಸ್ಯ ಎಸ್.ಎ.ಕೊತವಾಲ, ಎ.ಎ.ದೇಸಾಯಿ (ಅಬ್ಬಾಸ), ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ವಿ.ಕಲ್ಲಪ್ಪನವರ, ಲೋಕೋಪಯೋಗಿ ಇಲಾಖೆಯ ಎ.ಬಿ.ಹೊನ್ನಾವರ, ನಗರಸಭೆಯ ವ್ಹಿ.ಎಸ್.ತಡಸಲೂರ, ಅರಣ್ಯ ಇಲಾಖೆಯ ಡಿ.ದೇವರಾಜ ಸೇರಿದಂತೆ ಇತರರು ಇದ್ದರು.

Related posts: