RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಚರಣೆ

ಗೋಕಾಕ:ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಚರಣೆ 

ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಚರಣೆ

ಬೆಟಗೇರಿ ಜು 12 : ಮೂಡಲಗಿ ಕೇಂದ್ರ ವ್ಯಾಪ್ತಿಯ ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ಜಿಲ್ಲೆ 2, ಇವರ ಸಹಯೋಗದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐ.ಎಮ್.ಸೊಂಡೂರ, ದೇವರಾಜ, ರವೀಂದ್ರ ಅವರು ಮುಖ್ಯ ಅತಿಥಿಗಳಾಗಿ ವಿಶ್ವ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಸೊಲಾರ್‍ದಿಂದಾಗುವ ಪ್ರಯೋಜನಗಳ ಕುರಿತು ಮಾತನಾಡಿದರು.
ಸ್ಥಳೀಯ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಬಾಬುರಾವ ಗೋಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ಸುಜಾತಾ ಗುಡಿಮನಿ, ಬಸವರಾಜ ಕರಿಗಾರ, ಲಕ್ಷ್ಮೀ ಚಂದರಗಿ, ಭಾರತಿ ಗುದಗನ್ನವರ, ವೀಣಾ ಹತ್ತಿ, ವಿ.ಬಿ.ಬಿರಾದಾರ, ಎ.ಬಿ.ತಾಂವಶಿ, ರಾಕೇಶ ನಡೋಣಿ, ಶುಭಾ.ಬಿ., ಜಯಶ್ರೀ ಇಟ್ನಾಳ, ಮಲ್ಹಾರಿ ಪೋಳ ಸೇರಿದಂತೆ ಮೂಡಲಗಿ ಮತ್ತು ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ಸದಸ್ಯರು, ಶಾಲೆಯ ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಣಪ್ರೇಮಿಗಳು, ಗ್ರಾಮದ ಮಹಿಳೆಯರು, ಶಾಲೆಯ ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು, ಇತರರು ಇದ್ದರು.
ಮಂಜುನಾಥ ಹತ್ತಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಮೋಹನ ತುಪ್ಪದ ಕೊನೆಗೆ ವಂದಿಸಿದರು.

Related posts: