RNI NO. KARKAN/2006/27779|Wednesday, October 15, 2025
You are here: Home » breaking news » ಘಟಪ್ರಭಾ:ಶ್ರೀಮಠದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಘಟಪ್ರಭಾ:ಶ್ರೀಮಠದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ 

ಶ್ರೀಮಠದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಘಟಪ್ರಭಾ ಜು 23 : ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜನೇವರಿ 2019ರಲ್ಲಿ ಜರಗುವ 25ನೇ ಸಾಧನಾ ಸಂಭ್ರಮದ ಅಂಗವಾಗಿ ಬೃಹತ್ ಸಮಾರಂಭವು ನಡೆಯಲಿರುವ ಪ್ರಯುಕ್ತ ಶ್ರೀಮಠದ ಪೂಜ್ಯ ಶ್ರೀ ನಿಜಗುಣ ದೇವರು ನೇತ್ರತ್ವದಲ್ಲಿ “ಹಸಿರು ಹುಣಶ್ಯಾಳ” ಕಾರ್ಯಕ್ರಮದ ನಿಮಿತ್ಯ ಮನೆಗೊಂದು ಮರ ನೆಡುವ ಸಂಕಲ್ಪದೊಂದಿಗೆ ಶ್ರೀಮಠದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶ್ರೀಮಠದ ಆವರಣದಲ್ಲಿ ಈ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ 25 ಜನ ಮಠಾಧೀಶರು ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts: