ಮೂಡಲಗಿ:ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ
ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ
ಮೂಡಲಗಿ ಅ 18 : ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು
ಅಟಲ್‍ಜಿ ಅಪ್ರತಿಮ ರಾಜಕಾರಣಿ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿದರು.
ಸಂಸ್ಥೆಯ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಮಾತನಾಡಿ ‘ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಸರಳ, ಸಜ್ಜನ, ಅಜಾತಶತ್ರು ಭಾರತ ದೇಶ ಕಂಡ ಅಪ್ರತಿಮ ರಾಜಕಾರಣಿ’ ಎಂದರು.
ವಿಶ್ವಕ್ಕೆ ಮಾದರಿಯಾಗುವಂತ ವ್ಯಕ್ತಿತ್ವ ರೂಪಿಸಿಕೊಂಡಿದ್ದ ಅಟಲ್‍ಜಿರಂಥ ಮಹಾನ ವ್ಯಕ್ತಿಯನ್ನು ದೇಶವು ಕಳೆದುಕೊಂಡಿರುವುದು ತುಂಬಲಾರದಂತ ನಷ್ಟವಾಗಿದೆ ಎಂದರು.
ಸಂಸ್ಥೆಯ ಎಲ್ಲ ಸಿಬ್ಬಂದಿಯವರು ಭಾಗವಹಿಸಿದ್ದರು.
ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಲ್ಲ ಕಾಲೇಜು, ಶಾಲೆಗಳಲ್ಲಿ ಶನಿವಾರ ಬೆಳಿಗ್ಗೆ ಮೌನ ಆಚರಿಸಿ ವಾಜಪೇಯಿ ಅವರಿಗೆ ಶ್ರದ್ದಾಂಜಲಿ ಅರ್ಪಿಸಿದರು.
ಪ್ರಾಚಾರ್ಯ ಡಾ.ಆರ್.ಎ. ಶಾಸ್ತ್ರೀಮಠ, ಪ್ರೊ. ಸಂಗಮೇಶ ಗುಜಗೊಂಡ ವಾಜಪೇಯಿ ಅವರ ಕುರಿತು ಮಾತನಾಡಿದರು.