ಮೂಡಲಗಿ:ಶ್ರೀಕಾಂತ ಕಮತಿಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಶ್ರೀಕಾಂತ ಕಮತಿಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಮೂಡಲಗಿ ಸೆ 5 : ಸಮೀಪದ ಕಮಲದಿನ್ನಿ ತೋಟದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀಕಾಂತ ಕಮತಿ ಇವರಿಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಚಿಕ್ಕೋಡಿ ಜಿಲ್ಲೆಯ ಡಿ.ಡಿ.ಪಿ.ಐ ಎಮ್.ಜಿ ದಾಸರ, ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು ಶಿಕ್ಷಕ ಶ್ರೀಕಾಂತ ಕಮತಿಯವರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ವಿತರಿಸಿದರು.