ಅಥಣಿ:ಬಟ್ಟೆ ಅಂಗಡಿಗೆ ಬೆಂಕಿ : ಲಕ್ಷಾಂತರ ಮೌಲ್ಯದ ಬಟ್ಟೆಗಳು ಭಸ್ಮ , ಅಥಣಿಯಲ್ಲಿ ಘಟನೆ
ಬಟ್ಟೆ ಅಂಗಡಿಗೆ ಬೆಂಕಿ : ಲಕ್ಷಾಂತರ ಮೌಲ್ಯದ ಬಟ್ಟೆಗಳು ಭಸ್ಮ , ಅಥಣಿಯಲ್ಲಿ ಘಟನೆ
ಅಥಣಿ ಸೆ 13 : ಬಟ್ಟೆ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಗ್ನಿಶಾಮಕದಳದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿರುವ ಆರ್ಆರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿಗಳ ಬಟ್ಟೆಗಳು ಬೆಂಕಿಗೆ ಭಸ್ಮವಾಗಿವೆ. ಇದು ಪಿಂಟು ರಾಥೋಡ್ ಎಂಬುವರಿಗೆ ಸೇರಿದ ಅಂಗಡಿಯೆಂದು ತಿಳಿದು ಬಂದಿದೆ. ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದರಿಂದ ಸಂಭವಿಸಲಿದ್ದ ಭಾರೀ ಅನಾಹುತವೊಂದು ತಪ್ಪಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.