RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ನೂತನ ಗೋಕಾಕ ಜಿಲ್ಲೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ : ಮುರಘರಾಜೇಂದ್ರ ಶ್ರೀ

ಗೋಕಾಕ:ನೂತನ ಗೋಕಾಕ ಜಿಲ್ಲೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ : ಮುರಘರಾಜೇಂದ್ರ ಶ್ರೀ 

ನೂತನ ಗೋಕಾಕ ಜಿಲ್ಲೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ : ಮುರಘರಾಜೇಂದ್ರ ಶ್ರೀ
ಗೋಕಾಕ ಸೆ 14 : ಗೋಕಾಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ನಾಳೆ ಬೆಳಗಾವಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿಯೋಜಿತ ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮೀತಿ ವತಿಯಿಂದ ಮನವಿ ಅರ್ಪಿಸಲಾಗುವದು ಎಂದು ನಗರದ ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಶ್ರೀ ಮುರಘರಾಜೇಂದ್ರ ಸ್ವಾಮಿಗಳು ಹೇಳಿದರು

ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ಕರೆದಿದ್ದ ಚಾಲನಾ ಸಮೀತಿಯ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು

ಕಳೆದ ಸುಮಾರು 4 ದಶಕಗಳಿಂದ ಗೋಕಾಕ ಜಿಲ್ಲೆ ಮಾಡುವಂತೆ ಆಗ್ರಹಿ ಹಲವಾರು ಹೋರಾಟಗಳು ನಡೆಯುತಾ ಬಂದಿದ್ದು , ಹೋರಾಟವನ್ನು ತೀವ್ರ ಮಾಡುವ ನಿಟ್ಟಿನಲ್ಲಿ ನಾಳೆ ಮುಖ್ಯಮಂತ್ರಿ ಅವರಿಗೆ ಮನವಿ ಅರ್ಪಿಸಿ ಮುಂದಿನ ಹೋರಾಟದ ರೂಪರೇಷೆಗಳನ್ನು ಸಿದ್ದಪಡಿಸಲಾಗುವದು . ಎಲ್ಲರೂ ಪಕ್ಷ ಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀಗಳು ಮನವಿ ಮಾಡಿದರು

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅಶೋಕ ಪೂಜಾರಿ , ಘಟಪ್ರಭಾ ಸಹಕಾರಿ ಸಕ್ಕರೆ ಕಾರಖಾನೆಯ ಅಧ್ಯಕ್ಷ ಅಶೋಕ ಪಾಟೀಲ , ನಗರಸಭೆಯ ಸದಸ್ಯರು , ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು

Related posts: